ಮನೆ ರಾಜ್ಯ ಶಾಮನೂರು ನಿಧನ – ಇಂದು ದಾವಣಗೆರೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ..!

ಶಾಮನೂರು ನಿಧನ – ಇಂದು ದಾವಣಗೆರೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ..!

0

ದಾವಣಗೆರೆ : ರಾಜ್ಯ ರಾಜಕಾರಣದ ಹಿರಿಯ ಧುರೀಣ ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾಗಿದ್ದು, ಇಂದು (ಸೋಮವಾರ) ದಾವಣಗೆರೆಯಲ್ಲೇ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆ ನಗರ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಾವಣಗೆರೆ ನಗರ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುಧಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಅಲ್ಲದೇ ಇಂದು (ಸೋಮವಾರ) ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಬೇಕಿದ್ದ, ಎಲ್ಲಾ ಪರೀಕ್ಷೆಗಳೂ ಸಗ ಮುಂದೂಡಿಕೆಯಾಗಿದೆ. ನಾಳಿನ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿರುವುದಾಗಿ ದಾವಣಗೆರೆ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಸಿ.ಕೆ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂದೂಡಿಕೆಯಾದ ಪರೀಕ್ಷಾ ದಿನಾಂಕವನ್ನ ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ, ಶಿವಶಂಕರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶಾಮನೂರು ಅವರು ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.