ಶ್ರೀರಂಗಪಟ್ಟಣ: ತಾಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷ ನಡೆಯುವ ಕಡೆಯ ಕಾರ್ತಿಕ ಸೋಮವಾರದ ಅಂಗವಾಗಿ ಸೋಮವಾರ ರಾತ್ರಿ ಶಂಭುಲಿಂಗೇಶ್ವರ ದೇಗುಲದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.
ಮುಂಜಾನೆ ದೇಗುಲದ ಮುಂಭಾಗ ಕೊಂಡೋತ್ಸವ ನಡೆದು ಶಂಭುಲಿಂಗೇಶ್ವರ ದೇವರ ಉತ್ಸವ ಮೂರ್ತಿಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಪುನೀತರಾದರು.