ಮನೆ ಕ್ರೀಡೆ ಶ್ರೇಷ್ಟ  ಲೆಗ್ ಸ್ಪಿನ್ನರ್ ಆಸ್ಟ್ರೇಲಿಯಾದ ಶೇನ್‌ ವಾರ್ನ್  ನಿಧನ

ಶ್ರೇಷ್ಟ  ಲೆಗ್ ಸ್ಪಿನ್ನರ್ ಆಸ್ಟ್ರೇಲಿಯಾದ ಶೇನ್‌ ವಾರ್ನ್  ನಿಧನ

0

ಬೆಂಗಳೂರು: ವಿಶ್ವದ ಶ್ರೇಷ್ಠ ಲೆಗ್‌ ಸ್ಪಿನ್ನರ್‌ ಎಂದೇ ಮಾನ್ಯರಾದ ಆಸ್ಟ್ರೇಲಿಯಾದ ಶೇನ್‌ ವಾರ್ನ್ (52) ಶುಕ್ರವಾರ ರಾತ್ರಿ ನಿಧನರಾಗಿದ್ದು, ಶೇನ್ ವಾರ್ನ್ ನಿಧನಕ್ಕೆ ಕ್ರಿಕೆಟ್ ದಿಗ್ಗಜರು ಸಂತಾಪ ತಿಳಿಸಿದ್ದಾರೆ.

ಭಾರತದ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

‘ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ಭಾರತೀಯರಿಗೆ ನಿಮ್ಮ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಹಾಗೆಯೇ ಭಾರತೀಯರ ಹೃದಯದಲ್ಲೂ ನೀವು ವಿಶೇಷ ಸ್ಥಾನ ಗಳಿಸಿದ್ದೀರಿ. ನೀವಿದ್ದ ಜಾಗದಲ್ಲಿ ಹರುಷಕ್ಕೆ ಕೊರತೆ ಇರುತ್ತಿರಲಿಲ್ಲ. ನಿಮ್ಮ ಸಾವು ತುಂಬಾ ದುಃಖ ತಂದಿದೆ. ವಿಲ್ ಮಿಸ್ ಯು ವಾರ್ನಿ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಮೈದಾನದಲ್ಲಿ ನಮ್ಮ ಸ್ಪರ್ಧೆ ಮತ್ತು ಮೈದಾನದ ಹೊರಗೆ ನಮ್ಮ ಹಾಸ್ಯಮಯ ಕ್ಷಣಗಳನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ’ ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ.

2007ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಶೇನ್ ವಾರ್ನ್ ಅವರು ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ. 145 ಟೆಸ್ಟ್ ಪಂದ್ಯಗಳನ್ನು ಆಡಿದ್ದ ಶೇನ್ ವಾರ್ನ್ ವೃತ್ತಿ ಬದುಕು 1992ರಲ್ಲಿ ಭಾರತದ ವಿರುದ್ಧ ಚೊಚ್ಚಲ ಪಂದ್ಯದಿಂದ ಆರಂಭವಾಗಿತ್ತು. ವಾರ್ನ್​ ಟೆಸ್ಟ್ ಬದುಕಿನಲ್ಲಿ ಒಟ್ಟಾರೆ 708 ವಿಕೆಟ್ ಪಡೆದಿದ್ದಾರೆ. ಹಾಗೆಯೇ 194 ಏಕದಿನ ಪಂದ್ಯಗಳಲ್ಲಿ 293 ವಿಕೆಟ್ ಪಡೆದು ಮಿಂಚಿದ್ದರು.

ಹಿಂದಿನ ಲೇಖನಬಜೆಟ್‌ ನಲ್ಲಿ‌ ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು; ಸಚಿವ ಎಸ್.ಟಿ.ಸೋಮಶೇಖರ್
ಮುಂದಿನ ಲೇಖನಮಡಹಳ್ಳಿ ಬಿಳಿಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ: ಮೂವರ ಸಾವು