ಮನೆ ರಾಜ್ಯ ಕಾಡಾನೆ ದಾಳಿಯಲ್ಲಿ ಗಾಯಗೊಂಡಿದ್ದ ಶಾರ್ಪ್ ಶೂಟರ್ ವೆಂಕಟೇಶ್ ಸಾವು

ಕಾಡಾನೆ ದಾಳಿಯಲ್ಲಿ ಗಾಯಗೊಂಡಿದ್ದ ಶಾರ್ಪ್ ಶೂಟರ್ ವೆಂಕಟೇಶ್ ಸಾವು

0

ಸಕಲೇಶಪುರ: ಗಾಯಗೊಂಡಿದ್ದ ಭೀಮ ಕಾಡಾನೆಗೆ ಚಿಕಿತ್ಸೆ ನೀಡುವ ಸಲುವಾಗಿ ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಿದ ಸಂದರ್ಭದಲ್ಲಿ ಭೀಮ ಕಾಡಾನೆ ಓಡಿ ಬಂದು ಅರಣ್ಯ ಇಲಾಖೆ ಶಾರ್ಪ್ ಶೂಟರ್ ವೆಂಕಟೇಶ್ ರವರ ಮೇಲೆ ದಾಳಿ ನಡೆಸಿದ ಘಟನೆ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಆ.31ರ ಗುರುವಾರ ಬೆಳಗ್ಗೆ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡ ವೆಂಕಟೇಶ್ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಇದೀಗ  ಚಿಕಿತ್ಸೆ ಫಲಕಾರಿಯಾಗಾದೆ ವೆಂಕಟೇಶ್ ಮೃತಪಟ್ಟಿದ್ದಾರೆ.

ಸಕಲೇಶಪುರದ ಆಲೂರು ತಾಲೂಕಿನಲ್ಲಿ ಗಾಯಗೊಂಡು ತಿರುಗಾಡುತ್ತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರೆವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಮುಂದಾದಾಗ  ಏಕಾಏಕಿ ಬಂದ ಕಾಡಾನೆ ವೆಂಕಟೇಶ್ ಅವರನ್ನು ತುಳಿದು ಹಾಕಿತ್ತು.

ಇದರಿಂದ ವೆಂಕಟೇಶ್ ಗಂಭೀರ ಗಾಯಗೊಂಡಿದ್ದು, ಹಾಸನದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಹಿಂದಿನ ಲೇಖನಮತ್ತೊಮ್ಮೆ ಮೋದಿ ಸರ್ಕಾರವನ್ನೇ ದೇಶದ ಜನತೆ ಬಯಸಿದ್ದಾರೆ: ತೇಜಸ್ವಿ ಸೂರ್ಯ
ಮುಂದಿನ ಲೇಖನಸೆಪ್ಟೆಂಬರ್ 18 ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ: ಸಚಿವ ಪ್ರಲ್ಹಾದ್ ಜೋಶಿ