ಮನೆ ರಾಜ್ಯ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿ

ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿ

0

ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಅಕ್ರಮ ಬಾಂಗ್ಲಾದೇಶದ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರು ಹೊರವಲಯದ ಬೇಗೂರಿನ ಎಳೇನಹಳ್ಳಿಯಳ್ಳಿಯಲ್ಲಿರುವ ಡಂಪಿಂಗ್ ಯಾರ್ಡ್‌ನಲ್ಲಿ ನಡೆದಿದೆ. ಐದು ಎಕ್ರೆ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ, ಇವರನ್ನು ಕೆಲ ದಿನಗಳ ಹಿಂದೆ ಸ್ಥಳದಿಂದ ಖಾಲಿ ಮಾಡಲಾಗಿತ್ತು. ಆದರೆ ರಾತ್ರೋರಾತ್ರಿ ಮತ್ತೆ ವಲಸಿಗರು ಇಲ್ಲಿಗೆ ಆಗಮಿಸಿ ಶೆಡ್‌ ಹಾಕಿದ್ದರು.

ತಡರಾತ್ರಿ ಸಿಲಿಂಡರ್ ಸ್ಫೋಟದಿಂದ ಶೆಡ್‌ಗಳು ಹೊತ್ತಿ ಉರಿದಿದ್ದು ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಾಚಿತ್ತು. ವಿಚಾರ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡ ಕಾರಣದ ಬಗ್ಗೆ ಸಿಬ್ಬಂದಿ ಈಗ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.