ಮನೆ ರಾಜಕೀಯ ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಕೇಂದ್ರ ಸಚಿವರಲ್ಲಿ ಶೆಟ್ಟರ್ ಮನವಿ

ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಕೇಂದ್ರ ಸಚಿವರಲ್ಲಿ ಶೆಟ್ಟರ್ ಮನವಿ

0

ಬೆಳಗಾವಿ: ಬೆಳಗಾವಿ – ಕಿತ್ತೂರು – ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ ಮನವಿ ಸಲ್ಲಿಸಿದರು.

Join Our Whatsapp Group

ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ ಬೆಳಗಾವಿ – ಕಿತ್ತೂರು – ಧಾರವಾಡ ಮಾರ್ಗಕ್ಕೆ ಹೊಸ ರೈಲು ಮಾರ್ಗ ಯೋಜನೆ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಎರಡು ವರ್ಷಗಳ ಹಿಂದೆ ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯ ನಂತರವೂ ರಾಜ್ಯ ಸರ್ಕಾರದಿಂದ ಯಾವುದೇ ಭೂಮಿಯನ್ನು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿಲ್ಲ. ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಅನುಷ್ಠಾನ ತುಂಬಾ ಅಗತ್ಯವಿದೆ. ಯೋಜನೆಯನ್ನು ಶೀಘ್ರವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ನೈರುತ್ಯ ರೈಲ್ವೆ ಇಲಾಖೆಗೆ ಅಗತ್ಯವಿರುವ ಭೂಮಿಯನ್ನು ತ್ವರಿತವಾಗಿ ಹಸ್ತಾಂತರಿಸಲು ಕರ್ನಾಟಕ ಸರ್ಕಾರಕ್ಕೆ ಆರಂಭಿಕ ಕ್ರಮಗಳನ್ನು ಪ್ರಾರಂಭಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದರು.

ಬೆಳಗಾವಿಯಲ್ಲಿ ಮರು ರೂಪಿಸಲಾದ ಹೊಸ ರೈಲು ನಿಲ್ದಾಣವು ಎಲ್ಲ ರೀತಿಯ ನೂತನ ಸೌಲಭ್ಯಗಳನ್ನು ಹೊಂದಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ನಿವಾಸಿಗಳ ಬೇಡಿಕೆಯ ಆಧಾರದ ಮೇರೆಗೆ ಹೊಸ ರೈಲುಗಳನ್ನು ಪರಿಚಯಿಸಲು ಮನವಿ ಮಾಡಿದರು.

ಬೆಳಗಾವಿ- ಬೆಂಗಳೂರು- ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್, ಬೆಳಗಾವಿ-ಪುಣೆ-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್, ಬೆಳಗಾವಿ-ಅಯೋಧ್ಯೆ ಬೆಳಗಾವಿ, ಬೆಳಗಾವಿ-ಪಂಢರಪುರ-ಬೆಳಗಾವಿ, ಬೆಳಗಾವಿಯಲ್ಲಿ ವಾಸಿಸುವ ಮಲಯಾಳಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿ-ಕೊಚ್ಚಿವೆಲ್ಲಿ-ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ಅನ್ನು ಬೆಳಗಾವಿಯವರೆಗೆ ವಿಸ್ತರಿಸಲು ಶೆಟ್ಟರ್ ಮನವಿ ಮಾಡಿದರು.

ಹಿಂದಿನ ಲೇಖನಹೊಸ ಅಪರಾಧಿಕ ಕಾನೂನುಗಳ ವಿರುದ್ಧ ಮುಷ್ಕರ ನಡೆಸದಂತೆ ವಕೀಲರ ಸಂಘಗಳಿಗೆ ಬಿಸಿಐ ಮನವಿ
ಮುಂದಿನ ಲೇಖನಒಂದೇ ಕಟ್ಟಡದ ಐದು ಅಂಗಡಿಗಳಲ್ಲಿ ಸರಣಿ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ