ಮನೆ ರಾಜ್ಯ ಶಿಗ್ಗಾಂವಿ ಫಲಿತಾಂಶ: ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು

ಶಿಗ್ಗಾಂವಿ ಫಲಿತಾಂಶ: ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು

0

ಹಾವೇರಿ: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ ಕಾಂಗ್ರೆಸ್ ​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ.

Join Our Whatsapp Group

ಅಜ್ಜಂಪೀರ್ ಖಾದ್ರಿ ಅವರ ಬಂಡಾಯ ಕಾಂಗ್ರೆಸ್​ಗೆ ಆರಂಭದಲ್ಲಿ ತುಸು ಹಿನ್ನಡೆ ತಂದಿತ್ತು. ಆದರೆ ಅದನ್ನು ಶಮನಗೊಳಿಸಿ ಚುನಾವಣೆಯಲ್ಲಿ ಯಶಸ್ಸು ಕಾಣುವಲ್ಲಿ ಕಾಂಗ್ರೆಸ್ ಸಫಲವಾಗಿದೆ.

13,448 ಮತಗಳ ಅಂತರದ ಗೆಲುವು

ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಯಾಸೀರ್​ ಪಠಾಣ್ ​ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ 1,00,587 ಮತಗಳು ದೊರೆತಿದ್ದರೆ, ಶಿಗ್ಗಾಂವಿ ಬಿಜೆಪಿ​ ಅಭ್ಯರ್ಥಿ ಭರತ್​ ಬೊಮ್ಮಾಯಿಗೆ 86,960 ಮತಗಳು ದೊರೆತಿವೆ.

ಅಜ್ಜಂಪೀರ್​ ಖಾದ್ರಿ ಬಂಡಾಯ ಶಮನ ಆಗಿದ್ದು ಪಠಾಣ್​​ಗೆ ಪ್ಲಸ್ ಆಯಿತು. ಇಷ್ಟೇ ಅಲ್ಲ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿನ ರಣತಂತ್ರ ಹೆಣೆದಿದ್ದು, ವಾಲ್ಮೀಕಿ, ದಲಿತ ಮತದಾರರು ‘ಕೈ’ ಹಿಡಿದ ಲೆಕ್ಕಾಚಾರ ನಾಯಕರಿಗೆ ಇದೆ. ಸಚಿವ ಜಮೀರ್ ಮುಸ್ಲಿಂ ಮತದಾರರ ಓಲೈಕೆ ಮಾಡಿದ್ದು, ಪಠಾಣ್​ ಪರ ಅಜ್ಜಂಪೀರ್ ಖಾದ್ರಿ ಪ್ರಚಾರ ಮಾಡಿದ್ದು, ಸಿಎಂ ಮುಡಾ ಸಂಕಷ್ಟದ ಅನುಕಂಪ ವರ್ಕೌಟ್ ಆಗಿದ್ದಲ್ಲದೇ, ಕುರುಬ ಸಮಾಜದ ಮತ ಕಾಂಗ್ರೆಸ್​ಗೆ ವಾಲಿದ ನಂಬಿಕೆ ಆ ಪಕ್ಷದ ನಾಯಕರಲ್ಲಿದೆ.