ಮನೆ ರಾಜ್ಯ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು

ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು

0

ಶಿವಮೊಗ್ಗ: ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ ಪೇಟೆಯಲ್ಲಿ ನಡೆದಿದೆ.

Join Our Whatsapp Group

ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ವಿದ್ಯುತ್  ಸಂಪರ್ಕ ಇಲ್ಲದೇ  ವೈದ್ಯರು ಮೊಬೈಲ್ ಟಾರ್ಚ್  ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ಮಾಡಿದ್ದಾರೆ.

ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಗಲು ವೇಳೆಯಲ್ಲಿ ಇಬ್ಬರು ವೈದ್ಯರು ಕಾರ್ಯ ನಿರ್ವಹಿಸುತ್ತಿರುವ ಈ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರುವುದಿಲ್ಲ.

ಈ ಬಗ್ಗೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ವೈಧ್ಯಾಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಮೇಲಾಧಿಕಾರಿಗಳ ನಿರ್ಲಕ್ಷ್ಯ ವೇ ಇಷ್ಟೆಕೆಲ್ಲ ಕಾರಣ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.