ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಮುಜಾಯಿದ್ದೀನ್(32) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ನಿನ್ನೆ(ಜು.20) ರಾತ್ರಿ ಸುಮಾರು 12.30 ರ ಸುಮಾರಿಗೆ ಮೃತ ರೌಡಿಶೀಟರ್ ಮನೆಯಿಂದ ಹೊರಬಂದಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿ ಹೋಗಿದ್ದಾರೆ. ಇನ್ನು ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು.
ಘಟನೆ ಕುರಿತು ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
Saval TV on YouTube