ಮನೆ ಅಪರಾಧ ಶಿವಮೊಗ್ಗ: ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

0

ಶಿವಮೊಗ್ಗ: ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ.

ವಿದ್ಯಾರ್ಥಿನಿ ಮೇಘಶ್ರೀ ಹೋಮ್​ ಸಿಕ್ ​​ಗೆ‌ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿ. ಕಾಲೇಜಿನ ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಇಂದು (ಡಿ.05) ಬಯಾಲಾಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಪರೀಕ್ಷೆ ನಡುವೆ ವಾಶ್​ ರೂಂಗೆ ಹೋಗುವುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಮೇಘಶ್ರಿ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿಂದಿನ ಲೇಖನಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ
ಮುಂದಿನ ಲೇಖನಜ.5ರಂದು ರಾಜಸ್ಥಾನದ ಕರಣ್‌ ಪುರ ಕ್ಷೇತ್ರದ ಚುನಾವಣೆ: ಜ.8ರಂದು ಫಲಿತಾಂಶ