ಮನೆ ರಾಜ್ಯ ಶಿವಮೊಗ್ಗ ಸುಬ್ಬಣ್ಣ ನಿಧನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್.ಡಿ.ಕೆ ಸೇರಿದಂತೆ ಹಲವರಿಂದ ಸಂತಾಪ

ಶಿವಮೊಗ್ಗ ಸುಬ್ಬಣ್ಣ ನಿಧನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್.ಡಿ.ಕೆ ಸೇರಿದಂತೆ ಹಲವರಿಂದ ಸಂತಾಪ

0

ಬೆಂಗಳೂರು: ಕರ್ನಾಟಕ ಸುಗಮ ಸಂಗೀತದ ಪ್ರಸಿದ್ದ ಗಾಯಕರಾಗಿದ್ದ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕನ್ನಡ ಭಾವಗೀತೆಗಳಿಗೆ ಜೀವತುಂಬಿದ, ಕನ್ನಡದ ಮೊದಲ ರಜತ ಕಮಲ ಪ್ರಶಸ್ತಿಗೆ ಭಾಜನರಾದ ಅಪ್ರತಿಮ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಗಲಿಕೆ ಕನ್ನಡ ಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರಿಗೆ ಸದ್ಗತಿಯನ್ನು ಕರುಣಿಸಲಿ, ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಕನ್ನಡದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದಿಂದ ಸಂಗೀತ ಲೋಕ ಮತ್ತು ಕನ್ನಡಿಗರಾದ ನಾವೆಲ್ಲರೂ ಸಿರಿಕಂಠವೊಂದನ್ನು ಕಳೆದುಕೊಂಡಿದ್ದೇವೆ. ಸುಬ್ಬಣ್ಣ ಅವರು ಹಾಡುಗಳ ಮೂಲಕ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸುಗಮ ಸಂಗೀತ ಲೋಕದ ಅನನ್ಯ ಪ್ರತಿಭೆ, ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಕುವೆಂಪು, ಬೇಂದ್ರೆ ಸೇರಿ ಹೆಸರಾಂತ ಕವಿಗಳ ಗೀತೆಗಳಿಗೆ ಸ್ವರ ಕಟ್ಟಿದ ಸುಬ್ಬಣ್ಣ ಅವರ ಅಗಲಿಕೆ ನಾಡಿಗೆ ಬಹದೊಡ್ಡ ನಷ್ಟ. ಸುಬ್ಬಣ್ಣ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಸುಗಮ ಸಂಗೀತ ಲೋಕದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನ ಸುದ್ದಿ ಕೇಳಿ ಮನಸಿಗೆ ತೀವ್ರ ನೋವುಂಟಾಗಿದೆ. ಅವರ ನಿಧನದಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು – ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಹಿನ್ನೆಲೆ ಗಾಯನಕ್ಕೆ ರಜತ ಕಮಲ ರಾಷ್ಟ್ರಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡಿಗ ಎಂಬ ಕೀರ್ತಿಗೆ ಪಾತ್ರರಾದವರು. ಕಾಡು ಕುದುರೆ ಓಡಿ ಬಂದಿತ್ತಾ, ಕೋಡಗನ ಕೋಳಿ ನುಂಗಿತ್ತಾ…ಸೇರಿದಂತೆ ಅವರು ಹಾಡಿರುವ ಹಲವಾರು ಗೀತೆಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ.

ಕುವೆಂಪು, ಶಿಶುನಾಳ ಶರೀಪ, ದ.ರಾ. ಬೇಂದ್ರೆ  ಮತ್ತಿತರರ ಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರ ಮನಗೆದ್ದಿದ್ದರು. ಶಿವಮೊಗ್ಗ ಸುಬ್ಬಣ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ  ಎಂದಿದ್ದಾರೆ.

ಹಿಂದಿನ ಲೇಖನಲೋಕಾಯುಕ್ತ ಸಂಸ್ಥೆಯಿಂದಲೇ ಎಲ್ಲವೂ ಶುದ್ದಿಯಾಗಬಹುದೆಂಬ ನಂಬಿಕೆ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ
ಮುಂದಿನ ಲೇಖನಮೈಸೂರು: ಕಾಡಾನೆ ದಾಳಿಗೆ ರೈತ ಬಲಿ