ಶಿವಮೊಗ್ಗ: ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭುವನೇಶ್ವರಿ, ಮಾರುತಿ, ಹಾಗೂ ದರ್ಶನ್ ಮೃತ ದುರ್ದೈವಿ.
ಶಿವಮೊಗ್ಗದ ಒಟಿ ರಸ್ತೆಯ ವಿಜಯ ಗ್ಯಾರೇಜ್ ಬಳಿ ಇರುವ ಮನೆಯಲ್ಲಿ ನಿನ್ನೆ ಸೋಮವಾರವೇ ವಿಷ ಸೇವಿಸಿದ್ದು, ಘಟನೆಯು ತಡವಾಗಿ ಬೆಳಕಿಗೆ ಬಂದಿದೆ. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಸಂಬಂಧಿಗಳು ಮನೆಗೆ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಭುವನೇಶ್ವರಿ ಜತೆಗೆ ಅವರ ತಮ್ಮ ಮಾರುತಿ ಹಾಗೂ ಪುತ್ರ ದರ್ಶನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ದೊಡ್ಡಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
Saval TV on YouTube