ಶಿರ್ವ(ಉಡುಪಿ): ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರೆಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ದ್ವಂಸಗೊಳಿಸಿದ್ದಾರೆ.
ಖಾಸಗಿ ಜಾಗದಲ್ಲಿರುವ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು 30 ವರ್ಷಗಳಿಂದ ಆರಾಧಿಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಫೆ.19 ರಂದು ಸ್ಥಳೀಯರು ಸ್ಥಳಕ್ಕೆ ತೆರಳಿದಾಗ ದುಷ್ಕರ್ಮಿಗಳು ಶಿಲುಬೆಯನ್ನು ಹಾನಿಗೊಳಿಸಿರುವುದು ಗಮನಕ್ಕೆ ಬಂದಿದೆ.
ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














