ಮೈಸೂರು: ನಟ ಶಿವರಾಜ್ ಕುಮಾರ್ ಅವರು ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರವಾಗಿ ಪ್ರಚಾರ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಂಸದ ಪ್ರತಾಪ ಸಿಂಹ ಮಾಡಿರುವ ಟ್ವೀಟ್’ಗೆ ನಟ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದಾರೆ.
ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವ ಭಾವ ಭಕುತಿಗೆ…’ ಎಂದು ಸಂಸದ ಪ್ರತಾಪ ಸಿಂಹ ಟ್ವೀಟ್ ಮಾಡಿದ್ದರು.
ಒಂದೆಡೆ ರಾಘವೇಂದ್ರ ರಾಜ್ಕುಮಾರ್ ಅವರು ಸೋಮಣ್ಣ ಅವರನ್ನು ಹೊಗಳುವ ವಿಡಿಯೊ, ಇನ್ನೊಂದೆಡೆ ಸಿದ್ದರಾಮಯ್ಯ ಪರವಾಗಿ ಪ್ರಚಾರ ಮಾಡುತ್ತಿರುವ ಶಿವರಾಜ್ ಕುಮಾರ್ ಫೋಟೊ ಹಾಕಿದ್ದರು.
ಇದಕ್ಕೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿರುವ ಪ್ರಕಾಶ್ ರಾಜ್, ನಿಮ್ಮ ಹೊಲಸು ರಾಜಕಾರಣಕ್ಕೆ ..ನಮ್ಮೆಲ್ಲರ “ಅಪ್ಪು” ಅವರನ್ನ ಯಾಕ್ ಎಳೀತೀರ್ರಿ @mepratap ಅವರೆ .. ಛಿ ಛೀ .. ಇದು ತುಂಬಾ ದೊಡ್ಡ ತಪ್ಪು .. ಮಾಡ್ಬೇಡಿ… #justasking ಎಂದು ಹಾಕಿದ್ದಾರೆ.














