ಮನೆ ಮನರಂಜನೆ ತೆಲುಗಿನ ಸೈಕಲ್‌ ರಾಜಕಾರಣಿ ಗುಮ್ಮಡಿ ನರಸಯ್ಯನಾದ ಶಿವಣ್ಣ

ತೆಲುಗಿನ ಸೈಕಲ್‌ ರಾಜಕಾರಣಿ ಗುಮ್ಮಡಿ ನರಸಯ್ಯನಾದ ಶಿವಣ್ಣ

0

ನಟ ಶಿವರಾಜ್ ಕುಮಾರ್ ಹೊಸ ಸಿನಿಮಾ ದೀಪಾವಳಿ ಹಬ್ಬದ ವಿಶೇಷವಾಗಿ ಘೋಷಣೆಯಾಗಿದೆ. ರಾಜಕಾರಣಿಯಾಗಿ ಶಿವಣ್ಣ ಪ್ರತ್ಯಕ್ಷರಾಗಿದ್ದಾರೆ. ಆಂಧ್ರ ಮೂಲದ ಯೆಲ್ಲಾಂಡು ರಾಜಕಾರಣಿ ಗುಮ್ಮಡಿ ನರಸಯ್ಯ ಜೀವನಗಾಥೆಯಲ್ಲಿ ಕರುನಾಡ ಕಿಂಗ್ ಮಿಂಚಲಿದ್ದಾರೆ.

ಈಗಾಗಲೇ ತೆಲುಗಿನಲ್ಲಿ ಚಿರು ಗೋಡವಾಲು, ಲಾವಣ್ಯ ವಿತ್ ಲವ್ ಬಾಯ್ಸ್ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ಪರಮೇಶ್ವರ್ ಹಿವ್ರಲೆ ಗುಮ್ಮಡಿ ನರಸಯ್ಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಹಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಕನ್ನಡದಲ್ಲಿ ಸಿನಿಮಾ ಮಾಡುತ್ತಿದ್ದಾರೆ.

ದೀಪಾವಳಿ ಹಬ್ಬಕ್ಕಾಗಿ ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಸೈಕಲ್ ತಳ್ಳುತ್ತಾ, ಹೆಗಲಿಗೆ ಕೆಂಪು ಶಾಲು ಹಾಕಿಕೊಂಡು, ಕನ್ನಡಕ ಹಾಕಿಕೊಂಡ ಸರ್ಕಾರಿ ಕಚೇರಿ ಮುಂದೆ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಶಿವರಾಜ್ ಕುಮಾರ್ ಲುಕ್ ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಚಿತ್ರಕ್ಕೆ ಎನ್.ಸುರೇಶ್ ರೆಡ್ಡಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

ಅಂದ ಹಾಗೆ ಈ ಸಿನಿಮಾ ಕನ್ನಡ, ತೆಲುಗು ಸೇರಿದಂತೆ ಎಲ್ಲಾ ಭಾಷೆಯಲ್ಲಿ ಸಿನಿಮಾ ತೆರೆ ಕಾಣಲಿದೆ. ಐದು ಬಾರಿ ಶಾಸಕರಾಗಿದ್ದರೂ ಇವರು ಸೈಕಲ್ ನಲ್ಲಿಯೇ ಓಡಾಟ, ರಸ್ತೆ ಬದಿಯಲ್ಲಿ ಊಟ, ಹಳೆ ಮನೆಯಲ್ಲಿಯೇ ವಾಸ ಮಾಡುತ್ತಿದ್ದರು.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನ್ಯೂ ಡಿಮಾಕ್ರಸಿ ಅಥವಾ ಸಿಪಿಐನ ಸದಸ್ಯರಾಗಿರುವ ಗುಮ್ಮಡಿ ನರಸಯ್ಯ 1983-1994 ಹಾಗೂ 1999-2009 ನಡುವೆ ಯೆಲ್ಲಾಂಡುವಿನ ತೆಲಂಗಾಣ ವಿಧಾನಸಭೆಯ ಸದಸ್ಯರಾಗಿದ್ದರು. ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಅವರ ಹೋರಾಟದ ಬದುಕೇ ಒಂದು ಸ್ಪೂರ್ತಿ ಆಗಿತ್ತು. ಈಗ ಅದೇ ಸಿನಿಮಾವಾಗುತ್ತಿದೆ.