ಮನೆ ಅಪರಾಧ ಸಲ್ಮಾನ್‌ ಮನೆ ಬಳಿ ಗುಂಡಿನ ದಾಳಿ ಪ್ರಕರಣ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

ಸಲ್ಮಾನ್‌ ಮನೆ ಬಳಿ ಗುಂಡಿನ ದಾಳಿ ಪ್ರಕರಣ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

0

ಮುಂಬೈ: ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರ ಮನೆ ಬಳಿ ನಡೆದಿದ್ದ ಗುಂಡಿನ ದಾಳಿ ಪ್ರಕರಣ ಸಂಬಂಧ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಅನೂಜ್‌ ತಪನ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Join Our Whatsapp Group

ಆತ್ಮಹತ್ಯೆಗೆ ಯತ್ನಿಸಿದ್ದ ಅನೂಜ್‌ ತಪನ್‌ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಾಗಲೇ ಆತ ಕೊನೆಯುಸಿರೆಳೆದಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಏ.14ರಂದು ಮುಂಬೈನ ಬಾಂದ್ರಾದಲ್ಲಿನ ಸಲ್ಮಾನ್‌ ಮನೆ ಬಳಿ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಘಟನೆ ಸಂಬಂಧ ವಿಕ್ಕಿ ಗುಪ್ತಾ (24), ಸಾಗರ್ ಪಾಲ್ (21), ಸುಭಾಷ್‌ ಚಂದರ್‌ (37) ಮತ್ತು ಅನೂಜ್‌ ತಪನ್‌ (32) ಅವರನ್ನು ಪೊಲೀಸರು ಬಂಧಿಸಿದ್ದರು.

ಸಲ್ಮಾನ್ ಖಾನ್‌ ಅವರ ಮನೆ ಬಳಿ ನಡೆದಿದ್ದ ಗುಂಡಿನ ದಾಳಿಗೆ ಸಂಬಂಧಿಸಿ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ನನ್ನು ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಈ ಕೃತ್ಯದ ಸಂಬಂಧ ಆತನ ಸಹೋದರ ಅನ್ಮೋಲ್‌ ಬಿಷ್ಣೊಯ್‌ಗಾಗಿ ಈಗಾಗಲೇ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಲಾಗಿದೆ ಎಂದೂ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದಿನ ಲೇಖನಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಗರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಜಗದೀಶ್‌ ನೇಮಕ
ಮುಂದಿನ ಲೇಖನಕೋವಿಶೀಲ್ಡ್ ಲಸಿಕೆಯ ಅಪಾಯಕಾರಿ ಅಂಶ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಸುಪ್ರೀಂಗೆ ಅರ್ಜಿ