ಹುಬ್ಬಳ್ಳಿ: ದೇಶದ ಪ್ರಧಾನಮಂತ್ರಿಗಳ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನು ನೋಡಲು ಕೆಲ ಕುರುಬ ಸಮುದಾಯದ ಮುಖಂಡರು ವ್ಯಕ್ತಪಡಿಸಿದ್ದು, ಕೆಲ ದಿನಗಳಿಂದ ಹೇಳಿಕೆ ನೀಡುತ್ತಿರುವ ಕುರುಬ ಸಮುದಾಯದ ನಾಯಕ ಹೆಚ್ ವಿಶ್ವನಾಥ್, ಹೆಚ್ಎಂ ರೇವಣ್ಣ ಹಾಗೂ ಇವರ ಅನುಯಾಯಿಗಳು, ಮೋದಿಯವರಿಗೆ ಸವಾಲು ಹಾಕುವ ಏಕೈಕ ನಾಯಕರೆಂದರೆ ಅದು ಸಿದ್ದರಾಮಯ್ಯ.
ಅವರಿಂದಲೇ ಕಾಂಗ್ರೆಸ್ ಹೆಚ್ಚೆಚ್ಚು ಸ್ಥಾನಗಳನ್ನು ಗೆಲುವು ಸಾಧಿಸಿದೆ. ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋಗಬೇಕು ಎಂದು ಇಂಗಿತ ವ್ಯಕ್ತಪಡಿಸುತ್ತಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ್ದ ವಿಶ್ವನಾಥ್ ಅವರು, ಸಿದ್ದರಾಮಯ್ಯ ಅವರು ಯಾಕೆ ರಾಷ್ಟ್ರದ ರಾಜಕಾರಣಕ್ಕೆ ಹೋಗಬಾರದು. ಈ ಹಿಂದೆ ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿ ಆಗುವ ಯಾವುದೇ ಕನಸು ಕಂಡಿರಲಿಲ್ಲ. ಅದರಂತೆ ಸಿದ್ದರಾಮಯ್ಯ ಅವರು ಯಾವುದೇ ಕನಸು ಕಂಡಿಲ್ಲ. ಆದರೆ ನಾವು ಕನಸು ಕಾಣುತ್ತೇವೆಂದು ಹೇಳಿದ್ದರು.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ರೇಸ್ ನಲ್ಲಿ ಇಲ್ಲ. ಆದರೆ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಆ ಸ್ಥಾನಕ್ಕೇರಬಹದುದು ಎಂದು ಹೇಳಿದ್ದಾರೆ. ಇದೇ ವೇಳೆ ನರೇಂದ್ರ ಮೋದಿಯವರನ್ನು ಉದಾಹರಣೆಯಾಗಿ ನೀಡಿದ್ದಾರೆ.
ಸಿದ್ದರಾಮಯ್ಯ ಅವರು, ನನಗೆ ಈ ಬಗ್ಗೆ ಆಸಕ್ತಿ ಇಲ್ಲ. ನಾನು ರಾಷ್ಟ್ರ ರಾಜಕಾರಣಕ್ಕೆ ಬರುವುದಿಲ್ಲ. ಆದರೆ, ಪ್ರಜಾಪ್ರಭುತ್ವದಲ್ಲಿ, ಯಾರು ಬೇಕಾದರೂ ಪ್ರಧಾನಿಯಾಗಬಹುದು. ಮೋದಿ ಅವರು ಗುಜರಾತ್ ರಾಜ್ಯದ ಸಿಎಂ ಆಗಿದ್ದರು. ನಂತರ ಪ್ರಧಾನಮಂತ್ರಿಗಳಾದರು ಎಂದು ಉದಾಹರಣೆ ನೀಡಿದರು.