ಮನೆ ರಾಜಕೀಯ ಸಿದ್ಧಗಂಗಾ ಶ್ರೀ ಅವರನ್ನು ರಾಷ್ಟ್ರೀಯ ಸಂತ ಎಂದು ಘೋಷಣೆ ಮಾಡಲಿ: ಜಯಮೃತ್ಯುಂಜಯ ಸ್ವಾಮೀಜಿ

ಸಿದ್ಧಗಂಗಾ ಶ್ರೀ ಅವರನ್ನು ರಾಷ್ಟ್ರೀಯ ಸಂತ ಎಂದು ಘೋಷಣೆ ಮಾಡಲಿ: ಜಯಮೃತ್ಯುಂಜಯ ಸ್ವಾಮೀಜಿ

0

ದಾವಣಗೆರೆ: ಸಿದ್ಧಗಂಗಾ ಮಠದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಸಂತ ಎಂದು ಘೋಷಣೆ ಮಾಡಲಿ ಎಂದು ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಜಯಮೃತ್ಯುಂಜಯ ಸ್ವಾಮೀಜಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ರಾಷ್ಟ್ರಪತಿ ಗಾಂಧೀಜಿ, ಸರೋಜಿನಿ ನಾಯ್ಡು ಭಾರತದ ಕೋಗಿಲೆ ಎಂಬ ರೀತಿಯಲ್ಲಿ ಸಿದ್ಧಗಂಗಾ ಶ್ರೀ ರಾಷ್ಟ್ರೀಯ ಸಂತ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಲಿ ಎಂದಿದ್ದಾರೆ.

Join Our Whatsapp Group

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಯಮೃತ್ಯುಂಜಯ ಸ್ವಾಮೀಜಿ, ನಡೆದಾಡುವ ದೇವರು, ಕಾಯಕ ಯೋಗಿ, ದೇಶದಲ್ಲಿ‌ ತ್ರಿವಿಧ ದಾಸೋಹಿ ಎಂದೇ ಸಿದ್ಧಗಂಗಾ ಶ್ರೀಗಳು ಪ್ರಸಿದ್ದಿ‌ ಪಡೆದವರು‌. ಇದೇ ಕಾರಣಕ್ಕೆ ಅವರನ್ನು ರಾಷ್ಟ್ರೀಯ ಸಂತ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು ಎಂದು ಹೇಳಿದ್ದಾರೆ.

ಇನ್ನು ಈ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಜಯಮೃತ್ಯುಂಜಯ ಸ್ವಾಮೀಜಿ, ಕರ್ನಾಟಕ ಇತಿಹಾಸದಲ್ಲೇ ಲಿಂಗಾಯತರ ಮೇಲೆ ಯಾರೂ ಕೂಡ ಹಲ್ಲೆ ಮಾಡಿರಲಿಲ್ಲ. ಲಿಂಗಾಯತರ‌ ಮೇಲೆ‌‌ ಮಾರಣಾಂತಿಕ ಹಲ್ಲೆ‌ ರಾಜ್ಯ ಸರ್ಕಾರ ಕಾರಣವಾಗಿದೆ. ನಮ್ಮ ಹೋರಾಟ ಹತ್ತಿಕ್ಕಲು ಉದ್ದೇಶಪೂರ್ವಕವಾಗಿ ಪೊಲೀಸರಿಂದ ಹಲ್ಲೆ ನಡೆಸಿದ್ದಾರೆ. ಇದುವರೆಗೂ ನಮಗೆ ಕ್ಷಮಾಪಣೆ ಕೇಳಿಲ್ಲ, ಹಲ್ಲೆ ಮಾಡಿದ ಅಧಿಕಾರಿಗಳ ಮೇಲೆ ಕ್ರಮವಾಗಿಲ್ಲ. ಮಾನವ ಹಕ್ಕು ಆಯೋಗಕ್ಕೂ ನಮ್ಮ ವಕೀಲರು ದೂರು ಸಲ್ಲಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.