ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ (ಹಳೆಯದಾಗಿ ಟ್ವಿಟ್ಟರ್)ನಲ್ಲಿ ಸಂದೇಶವೊಂದನ್ನು ಹಂಚಿಕೊಂಡಿರುವ ಅವರು, “ವಿಧಾನಸೌಧದ ಮೆಟ್ಟಿಲುಗಳ ಮೇಲೆ ವಿಜಯೋತ್ಸವ ನಡೆಯಿತು. ಅಲ್ಲಿ ಯಾರೂ ಸತ್ತಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನ ಬಳಿ ಮಾತ್ರವೇ ಕಾಲ್ತುಳಿತ ಸಂಭವಿಸಿ ಜನರು ಸಾವನ್ನಪ್ಪಿದ್ದಾರೆ ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಇದರರ್ಥ ಅವರು ವಿಧಾನಸೌಧದ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ? ಅಥವಾ ಇಡೀ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯೋ?” ದಯವಿಟ್ಟು ಹೇಳುವಿರಾ ಎಂದು ಅವರು ಪ್ರಶ್ನಿಸಿದ್ದಾರೆ.
ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ಕೈ ತೊಳೆದುಕೊಳ್ಳುವುದು ಎಷ್ಟು ಸರಿ? ಎಂದು ಕಿಡಿಕಾರಿದ್ದಾರೆ. ಹೆಚ್ಚು ಜನ ಸೇರುವಂತಹ ಈ ಕಾರ್ಯಕ್ರಮಕ್ಕೆ ಸರಿಯಾದ ಮುನ್ನೆಚ್ಚರಿಕಾ ಕ್ರಮಗಳು ತೆಗೆದುಕೊಳ್ಳಲಾಗಿಲ್ಲ ಎಂಬುದು ಈಗ ಕೇಂದ್ರ ಚರ್ಚೆಯಾಗಿದೆ.














