ಮನೆ ರಾಜಕೀಯ ಸಿದ್ದರಾಮಯ್ಯ ರೀತಿ ರೀತಿ ಅಧಿಕಾರಕ್ಕಾಗಿ ಯಾರ ಯಾರ ಮನೆ ಬಾಗಿಲಿಗೂ ಹೋದವನಲ್ಲ: ಜಿ.ಟಿ. ದೇವೇಗೌಡ

ಸಿದ್ದರಾಮಯ್ಯ ರೀತಿ ರೀತಿ ಅಧಿಕಾರಕ್ಕಾಗಿ ಯಾರ ಯಾರ ಮನೆ ಬಾಗಿಲಿಗೂ ಹೋದವನಲ್ಲ: ಜಿ.ಟಿ. ದೇವೇಗೌಡ

0

ಮೈಸೂರು: ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ. ಅವರು ನನ್ನಷ್ಟು ಗಟ್ಟಿ ಅಲ್ಲವೇ ಅಲ್ಲ. ಅವರ ರೀತಿ ಅಧಿಕಾರಕ್ಕಾಗಿ ಯಾರ ಯಾರ ಮನೆ ಬಾಗಿಲಿಗೂ ಹೋದವನಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಜಿ.ಟಿ.ದೇವೇಗೌಡ ಸಿಡಿದೆದ್ದಿದ್ದಾರೆ.

Join Our Whatsapp Group

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ಜನರ ಆಶೀರ್ವಾದಿಂದ ಗೆಲ್ಲುತ್ತೇನೆ. ಪ್ರಚಾರದ ವೇಳೆ ನನಗೆ ಅದ್ಧೂರಿ ಸ್ವಾಗತ ಕೊಟ್ಟಿದ್ದರು. ಸಿದ್ದರಾಮಯ್ಯ ಇಷ್ಟು ವರ್ಷ ಇಲ್ಲಿ ರಾಜಕೀಯ ಮಾಡಿದ್ದಾರೆ. ಆದರೆ ನನ್ನ ವಿರುದ್ಧ ಯಾರನ್ನು ಕಣಕ್ಕಿಳಿಸಬೇಕು ಅನ್ನೋದು ಅವರಿಗೆ ಗೊತ್ತಿರಲಿಲ್ಲ. ತಾಲ್ಲೂಕು ಬೋರ್ಡ್, ಎಪಿಎಂಸಿ, ಡೈರಿಯಲ್ಲಿ ಅಪ್ಪ-ಮಕ್ಕಳು ಸೋತಿದ್ದಾರೆ. ಅಂತಹವರನ್ನು ಕರ್ಕೊಂಡು ಬಂದು ನನ್ನ ವಿರುದ್ಧ ನಿಲ್ಲಿಸಿದ್ದಾರೆ ಎಂದು ಗುಡುಗಿದರು.

ಸಿದ್ದರಾಮಯ್ಯ ಬರಿ ದ್ವೇಷದ ರಾಜಕಾರಣ ಮಾಡಿದರು. ತಮಗಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಮರಿಗೌಡನಿಗೆ ಟಿಕೆಟ್ ಕೊಡಬೇಕಿತ್ತು. ಒಕ್ಕಲಿಗರಲ್ಲೇ ಕೊಡುವುದಿದ್ದರೆ ಸತ್ಯಪ್ಪ ಮಗ ಅರುಣ್, ನರಸೇಗೌಡ ಮತ್ತು ಕೃಷ್ಣಸಾಗರ್ ಇದ್ದರು. ಇವರಿಗೆ ಕೊಟ್ಟಿದ್ದರೆ ಗೌರವಯುತವಾಗಿ ಸೋಲುತ್ತಿದ್ದರು. ಮಾವಿನಹಳ್ಳಿ ಸಿದ್ದೇಗೌಡ ಅವರ ಊರಲ್ಲೇ ಎಷ್ಟು ವೋಟ್ ತಗೋತಾನೆ ನೋಡೊಣ ಬನ್ನಿ. ಈ ಸಿದ್ದೇಗೌಡನನ್ನು ನಾನು ಯಾಕೆ ಬುಕ್ ಮಾಡಲಿ. ನಾನು ಸಿದ್ದೇಗೌಡನ ಜೊತೆ ಸೇರೋದು ಬಿಡಿ, ಅವನನ್ನು ನನ್ನ ಮನೆ ಬಾಗಿಲಿಗೆ ಸೇರಿಸುವುದಿಲ್ಲ ಎಂದರು.

ನಾನು ಗೆಲ್ಲಲಿ, ಸೋಲಲಿ ನನ್ನ ಜಾಯಮಾನದಲ್ಲಿ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಲ್ಲ. ಈ ಸಿದ್ದೇಗೌಡನ ಬಗ್ಗೆ ಸಿದ್ದರಾಮಯ್ಯಗೆ ನಾನು ಹೇಳಿದ್ದೆ. ನಾನು ಹೇಳಿದ್ದೆಲ್ಲ ಅವರು ಮರೆತು ಹೋಗಿದ್ದಾರೆ. ನನಗೆ ಹೋದ ಚುನಾವಣೆಯೇ ಕಷ್ಟ ಆಗಲಿಲ್ಲ. ಇನ್ನು ಈಗ ಕಷ್ಟ ಆಗುತ್ತಾ? ಮಾವಿನಹಳ್ಳಿ ಸಿದ್ದೇಗೌಡ ಬುಕ್ ಮಾಡೋದಲ್ಲ, ಜೀವಮಾನದಲ್ಲಿ ಮಾತನಾಡಿಸಲ್ಲ. ನನ್ನ ಬಿಟ್ಟು ಹೋದ ಐದು ಜನರನ್ನೂ ನಾನು ಹತ್ತಿರ ಸೇರಿಸಲ್ಲ. ನಾನು ಮಂಜೇಗೌಡ ಹಾಗೂ ವಾಸು ಯಾರ ಮನೆಗೂ ಹೋಗಲಿಲ್ಲ. ಸಿದ್ದರಾಮಯ್ಯಗೆ ಉಪಕಾರ ಸ್ಮರಣೆ ಇಲ್ಲ. ಅದಕ್ಕೆ ಇಷ್ಟೆಲ್ಲ ಆಗಿದೆ ಎಂದು ಕಿಡಿಕಾರಿದರು.