ಮನೆ ರಾಜ್ಯ ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ ನಿಧನಕ್ಕೆ ಸಿದ್ದರಾಮಯ್ಯ, ಡಿಕೆಶಿ ಸಂತಾಪ

ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ ನಿಧನಕ್ಕೆ ಸಿದ್ದರಾಮಯ್ಯ, ಡಿಕೆಶಿ ಸಂತಾಪ

0

ಬೆಂಗಳೂರು(Bengaluru): ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಜಿ.ರಾಜಶೇಖರ ಅವರಿಗೆ ಹಲವು ದಿನಗಳಿಂದ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಉಡುಪಿ ನಗರದ ಆದರ್ಶ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಈ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕನ್ನಡದ ಹಿರಿಯ ವಿಮರ್ಶಕ, ನೇರ-ನಿಷ್ಠುರ ನಡವಳಿಕೆಯ ಪ್ರಖರ ಚಿಂತಕ ಮತ್ತು ಸೌಹಾರ್ದ ಬದುಕಿನ ಹೋರಾಟಗಾರ ಜಿ.ರಾಜಶೇಖರ್ ಅಗಲಿಕೆ ನಮ್ಮೆಲ್ಲರ ಪಾಲಿಗೆ ತುಂಬಿಕೊಳ್ಳಲಾಗದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಸಹಬಾಳ್ವೆಯ ಸಮಾಜ ನಿರ್ಮಾಣಕ್ಕೆ ದುಡಿದ ಪ್ರಖರ ಚಿಂತಕ, ವಿಮರ್ಶಕ, ಲೇಖಕ ಜಿ.ರಾಜಶೇಖರ್ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ನೋವಾಯಿತು. ಅವರ ಕುಟುಂಬಸ್ಥರಿಗೆ ಸಂತಾಪ ಸಲ್ಲಿಸುತ್ತೇನೆ ಎಂದಿದ್ದಾರೆ.