ಮನೆ ರಾಜಕೀಯ ಸಿದ್ದರಾಮಯ್ಯ ಅವರಿಗೆ ಮಾತನಾಡಲು ಬೇರೆ ವಿಷಯವಿಲ್ಲ: ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಅವರಿಗೆ ಮಾತನಾಡಲು ಬೇರೆ ವಿಷಯವಿಲ್ಲ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್.ಬಿಟ್ಟರೆ ಮಾತನಾಡಲು ಬೇರೆ ವಿಷಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ  ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕದ ಜನತೆ ಎಲ್ಲವನ್ನು  ಗಮಸುತ್ತಿದ್ದಾರೆ. ಜನರಿಗೆ ರಾಜ್ಯ ದ ಅಭಿವೃದ್ಧಿ, ಭವಿಷ್ಯದ ಬಗ್ಗೆ  ಬೇಕು. ಆ ಬಗ್ಗೆ ಮಾತನಾಡಬೇಕು ಎಂದರು.

ನಾಳೆ ಶಾಸಕಾಂಗ ಪಕ್ಷದ ಸಭೆ

ರಾಜ್ಯ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ನಾಳೆ ಸಂಜೆ ಕರೆಯಲಾಗುವುದು ಎಂದರು.