ಮನೆ ರಾಜ್ಯ ಸಿದ್ದರಾಮಯ್ಯ ರಾಜ್ಯದ ನೂತನ ಸಿಎಂ: ಎಐಸಿಸಿಯಿಂದ ಅಧಿಕೃತ ಘೋಷಣೆ

ಸಿದ್ದರಾಮಯ್ಯ ರಾಜ್ಯದ ನೂತನ ಸಿಎಂ: ಎಐಸಿಸಿಯಿಂದ ಅಧಿಕೃತ ಘೋಷಣೆ

0

ಬೆಂಗಳೂರು: ಸಿದ್ದರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಇಂದು ಅಧಿಕೃತವಾಗಿ ಘೋಷಿಸಿದ್ದಾರೆ.

Join Our Whatsapp Group

ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಏಕೈಕ ಡಿಸಿಎಂ ಆಗಿರಲಿದ್ದಾರೆ. 2024 ಲೋಕಸಭೆ ಚುನಾವಣೆವರೆಗೆ ಅವರೇ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದೂ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ  ಮೇ.20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಹೈಕಮಾಂಡ್ ಸರಣಿ ಸಭೆಗಳನ್ನು ಮಾಡುವ ಮೂಲಕ ಮುಂದಿನ ಲೋಕಾಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಅಂತಿಮವಾಗಿ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಿದೆ.

ನಾಳೆ ಪ್ರಮಾಣವಚನ

ಇನ್ನು ದೆಹಲಿಯಲ್ಲಿ ಸಿದ್ದರಾಮಯ್ಯನವರ ಅಧಿಕೃತ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಇತ್ತ ಬೆಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಸಿದ್ದರಾಮಯ್ಯನವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ.

ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳು ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಂಠೀರವ ಸ್ಟುಡಿಯೋನಲ್ಲಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ

ಹೀಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬ್ಯಾರಿಕೇಡ್​ ಗಳನ್ನು ಹಾಕಿಸುತ್ತಿದ್ದಾರೆ. ಇನ್ನು ಕಂಠೀರವ ಕ್ರೀಡಾಂಗಣದಲ್ಲಿ 50 ಸಾವಿರಾರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಗಣ್ಯರು, ಶಾಸಕರು, ಪಕ್ಷದ ಮುಖಂಡರಿಗೆ ಪತ್ಯೇಕ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ.

ಹಿಂದಿನ ಲೇಖನಪಿಲಿಕುಳ ನಿಸರ್ಗಧಾಮ
ಮುಂದಿನ ಲೇಖನದೆಹಲಿಯ ಜಾಮಾ ಮಸೀದಿ ಬಳಿ ಗುಂಡು ಹಾರಿಸಿ ಯುವಕನ ಹತ್ಯೆ