ಮನೆ ರಾಜಕೀಯ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿರುವ ಸಿದ್ದರಾಮಯ್ಯ: ಸಿ.ಎನ್‌. ಅಶ್ವತ್ಥನಾರಾಯಣ

ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿರುವ ಸಿದ್ದರಾಮಯ್ಯ: ಸಿ.ಎನ್‌. ಅಶ್ವತ್ಥನಾರಾಯಣ

0

ಬೆಂಗಳೂರು(Bengaluru): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ಕೊಡಗಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಘಟನೆಯನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅಶ್ವತ್ಥನಾರಾಯಣ, ಪ್ರಚೋದನಕಾರಿ ಹೇಳಿಕೆ ನೀಡುವಲ್ಲಿ ನಿಸ್ಸೀಮರಾದ ಸಿದ್ದರಾಮಯ್ಯ ಅವರು ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್‌ ಫೋಟೊ ಯಾಕೆ? ಎಂದು ಕೇಳಿ ದೇಶಭಕ್ತರನ್ನು ಕೆರಳಿಸಿದ್ದಾರೆ. ಈಗ ತಮಗೂ ಮೊಟ್ಟೆ ಎಸೆಯಲು ಬರಲ್ವಾ? ಎಂದು ಕೇಳುವ ಮೂಲಕ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ  ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರೇ, ನಿಮ್ಮ ಸಿದ್ಧಾಂತ ಯಾವುದು? ಮತಾಂಧ ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸುವುದೇ?, ಮುಸ್ಲಿಂ ಏರಿಯಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಬಾರದು ಎಂಬುದೇ? ಜಾತಿ, ಧರ್ಮವನ್ನೊಡೆದು ಆಳುವುದೇ? ಅಥವಾ, ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ ಎಂದು ಅಶ್ವತ್ಥನಾರಾಯಣ ಪ್ರಶ್ನಿಸಿದ್ದಾರೆ.

ಹಿಂದಿನ ಲೇಖನದೆಹಲಿ ಗಲಭೆ: ಸಾಕ್ಷಿಗಳು, ಕೋರ್ಟಿನ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಪ್ರಾಸಿಕ್ಯೂಷನ್‌ಗೆ ದಂಡ ವಿಧಿಸಿದ ನ್ಯಾಯಾಲಯ
ಮುಂದಿನ ಲೇಖನತಮಿಳುನಾಡಿನ ಎಲ್ಲಾ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ