ಮನೆ ರಾಜಕೀಯ ಟಿಪ್ಪು ಸುಲ್ತಾನ್ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು: ಅಶ್ವತ್ಥ ನಾರಾಯಣ್​​

ಟಿಪ್ಪು ಸುಲ್ತಾನ್ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು: ಅಶ್ವತ್ಥ ನಾರಾಯಣ್​​

0

ಮಂಡ್ಯ: ಟಿಪ್ಪು ಸುಲ್ತಾನ್  ರೀತಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಸಚಿವ ಅಶ್ವತ್ಥ ನಾರಾಯಣ್​​ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಡ್ಯದ ಸಾತನೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, “ಟಿಪ್ಪುವಿನ ಜಾಗಕ್ಕೆ ಸಿದ್ದರಾಮಯ್ಯರವರು ಬಂದು ಬಿಡುತ್ತಾರೆ. ನಿಮಗೆ ಸಾವರ್ಕರ್ ಬೇಕಾ, ಟಿಪ್ಪು ಬೇಕಾ? ಎಂಬುದನ್ನು ನೀವೇ ತೀರ್ಮಾನಿಸಿ. ಹುರಿಗೌಡ ನಂಜೇಗೌಡ ಅವರು ಟಿಪ್ಪು ಸುಲ್ತಾನ್ ಗೆ ಏನು ಮಾಡಿದ್ರು ಅನ್ನೋದು ನಿಮಗೆ ಗೊತ್ತಿದೆ. ಅದೇ ರೀತಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು. ರಾಜ್ಯದಲ್ಲಿ ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ” ಎಂದಿದ್ದಾರೆ.

ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ

ಸಚಿವ ಅಶ್ವತ್ಥನಾರಾಯಣ್​ ಅವರ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವಿಟ್​​ ಮಾಡಿರುವ ಅವರು, ಸಚಿವ ಡಾ. ಅಶ್ವತ್ಥನಾರಾಯಣ ಅವರು ಮಾನಸಿಕ ಅಸ್ವಸ್ಥರ ರೀತಿ ಹೇಳಿಕೆ ನೀಡಿದ್ದು, ತಕ್ಷಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು. ಇಲ್ಲದಿದ್ದರೆ ಅಶ್ವತ್ಥನಾರಾಯಣ್​ ಮಾನಸಿಕ ಅಸ್ವಸ್ಥರೇ ಎಂಬುದನ್ನು ಭಾರತೀಯ ಜನತಾ ಪಕ್ಷ ಒಪ್ಪಿಕೊಂಡಂತಾಗುತ್ತದೆ ಎಂದು ಹೇಳಿದ್ದಾರೆ.

ಸಚಿವ ಅಶ್ವತ್ಥ್ ನಾರಾಯಣ್ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ? ಎಂದು ಪ್ರಶ್ನಿಸಿದ್ದಾರೆ.

ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ.. ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ ಎಂದು ಹರಿಹಾಯ್ದಿದ್ದಾರೆ.

ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಅಶ್ವತ್ಥ ನಾರಾಯಣ್ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ. ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ನನ್ನ ಹತ್ಯೆಗೆ ಅಶ್ವತ್ಥ ನಾರಾಯಣ್ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹಿಂದಿನ ಲೇಖನತ್ರಿಪುರ ಚುನಾವಣೆ: ನಿರ್ಭೀತಿಯಿಂದ ಮತ ಚಲಾಯಿಸುವಂತೆ ಮಲ್ಲಿಕಾರ್ಜುನ ಖರ್ಗೆ ಕರೆ
ಮುಂದಿನ ಲೇಖನಶಾಸಕ ಎಂ.ಸತೀಶ್ ರೆಡ್ಡಿ ಕೊಲೆಗೆ ಸಂಚು: ಇಬ್ಬರು ಆರೋಪಿಗಳ ಬಂಧನ