ತುಮಕೂರು(Tumkur): ಸಿದ್ದರಾಮಯ್ಯ ಅವರ ಮುಖ ರಾಮನದ್ದು. ಬುದ್ದಿ ಮಾತ್ರ ರಾವಣನದ್ದು. ಹಾಗಾಗಿ ಸಿದ್ದರಾಮಯ್ಯ ಅವರು ಸಿದ್ದರಾವಣ ಎಂದು ಹೆಸರು ಬದಲಾವಣೆ ಮಾಡಿಕೊಳ್ಳಬೇಕು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಸಲಹೆ ಮಾಡಿದ್ದಾರೆ.
ನಗರದಲ್ಲಿ ಭಾನುವಾರ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದಿಂದ ಹಮ್ಮಿಕೊಂಡಿದ್ದ ರಾಜ್ಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.
ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿಯಾಗಲು ಬಿಡಲಿಲ್ಲ. ಈಗ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಕುರ್ಚಿಯ ಮೇಲೆ ಟವೆಲ್ ಹಾಕಿದ್ದಾರೆ. ಆದರೆ, ಅವರು ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಭವಿಷ್ಯ ನುಡಿದರು.
ಸಮಾಜವಾದದ ಹೆಸರಲ್ಲಿ ರಾಜಕೀಯಕ್ಕೆ ಬಂದು, ಜಾತಿ ಹೆಸರಿನಲ್ಲಿ ಸಮಾಜ ಒಡೆಯುತ್ತಿದ್ದಾರೆ. ಸಿದ್ದರಾಮಯ್ಯಗೆ ಕುರುಬ ಸಮುದಾಯದ ಬಗ್ಗೆ ಕಾಳಜಿಯಿಲ್ಲ.ಅಲ್ಪಸಂಖ್ಯಾತರ ಮತಬ್ಯಾಂಕ್ ಗಾಗಿ ಟಿಪ್ಪು ಜಯಂತಿ ಮಾಡಿ ಹಿಂದೂ ಮುಸ್ಲಿಮರು ಹೊಡೆದಾಡುವಹಾಗೆ ಮಾಡಿದರು ಎಂದು ಹೇಳಿದರು.