ಚಿಕ್ಕಮಗಳೂರು(Chikkamagaluru): ನಾವು ಆರ್ ಎಸ್ ಮತ್ತು ಬಿಜೆಪಿ ಯಾವುದೇ ಬೆದರಿಕೆಗಳಿಗೆ ಬಗ್ಗಲ್ಲ. ರಾಜಕೀಯವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ, ನಾವು ಸತ್ಯ ಹೇಳುವುದೇ ತಪ್ಪಾಗಿ ಹೋಗಿದೆ. ಬಿಜೆಪಿಯವರು ನೀಚಮಟ್ಟಕ್ಕೆ ಇಳಿದು ರಾಜಕೀಯ ಮಾಡುತ್ತಿದ್ದಾರೆ. ಅವರು ಪ್ರತಿಭಟನೆ ಮಾಡಿದರೇ ನಾವೂ ಪ್ರತಿಭಟನೆ ಮಾಡುತ್ತೇವೆ ಎಂದರು.
ಸಾವರ್ಕರ್ ಕ್ಷಮಾಪಣಾ ಬರೆದುಕೊಟ್ಟು ಜೈಲಿನಿಂದ ಹೊರಬಂದಿದ್ದು. ಸೂಕ್ಷ್ಮ ಪ್ರದೇಶದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿದ್ದೇಕೆ ಎಂದಿದ್ದೆ. ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.