ಮನೆ ರಾಜಕೀಯ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ

24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ

0

ಬೆಂಗಳೂರು: “ಸಿದ್ದರಾಮಯ್ಯ ಎಂಬ ಹೆಸರಿನ ನಾನು…… “ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

Join Our Whatsapp Group

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಿತೀಶ್ ಕುಮಾರ್ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.

ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಕೆ ಶಿವಕುಮಾರ್ ಅವರು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಹಿಂದಿನ ಲೇಖನಪದಗ್ರಹಣಕ್ಕೆ ಕ್ಷಣಗಣನೆ: ರಾಹುಲ್, ಪ್ರಿಯಾಂಕಾ, ಸ್ಟಾಲಿನ್, ಕಮಲ್ ಹಾಸನ್ ಆಗಮನ
ಮುಂದಿನ ಲೇಖನಗಂಗಾಧರ ಅಜ್ಜನ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್