ಮನೆ ರಾಜ್ಯ ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಹುತೇಕ ಖಚಿತ: ಸಿದ್ದರಾಮನಹುಂಡಿಯಲ್ಲಿ ಸಂಭ್ರಮ

ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಹುತೇಕ ಖಚಿತ: ಸಿದ್ದರಾಮನಹುಂಡಿಯಲ್ಲಿ ಸಂಭ್ರಮ

0

ಮೈಸೂರು: ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗುವುದು ಖಚಿತವಾಗುತ್ತಿದ್ದಂತೆಯೇ, ಅವರ ಹುಟ್ಟೂರಾದ ಸಿದ್ದರಾಮನಹುಂಡಿಯಲ್ಲಿ ಸಂಭ್ರಮ ಮನೆ ಮಾಡಿದೆ.

Join Our Whatsapp Group

ಬೆಳಿಗ್ಗೆಯೇ ಅವರ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು, ಸಂಬಂಧಿಕರು ರಾಜಕೀಯ ಬೆಳವಣಿಗೆಗಳನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದರು. ಅವರ ಸಹೋದರ ಸಿದ್ದೇಗೌಡ ಕೂಡ ತಮ್ಮ ಮನೆಯಲ್ಲಿಯೇ ಟಿವಿ ಮುಂದೆ ಕೂತು ರಾಜಕೀಯ ಬೆಳವಣಿಗೆಗಳನ್ನು ಗಮನಿಸುತ್ತಿದ್ದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವುದು ಖಚಿತವಾಗುತ್ತಿದ್ದಂತೆಯೇ, ಅವರ ಕಟೌಟ್ ಗೆ ಹಾಲಿನ ಅಭಿಷೇಕ ನೆರವೇರಿಸಿದರು. ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಸೊಸೆ ಸ್ಮಿತಾ ಅವರು ಮನೆಯಲ್ಲಿ ಇರಲಿಲ್ಲ. ಮೇ13ರಂದು ಇಬ್ಬರೂ ಇದೇ ಮನೆಯಲ್ಲಿ ಕೂತು ಫಲಿತಾಂಶ ವೀಕ್ಷಿಸಿದ್ದರು.

ಮುಂಜಾಗ್ರತಾ ಕ್ರಮವಾಗಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಹಿಂದಿನ ಲೇಖನಸಿಎಂ ಆಯ್ಕೆ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ: ರಣದೀಪ್ ಸುರ್ಜೇವಾಲ ಸ್ಪಷ್ಟನೆ
ಮುಂದಿನ ಲೇಖನನಾನು ನಂಬಿದವರೇ ಕತ್ತು ಕೊಯ್ದರು: ಲಿಂಗಾಯತ ಮುಖಂಡರ ವಿರುದ್ಧ ವಿ. ಸೋಮಣ್ಣ ಕಿಡಿ