ಮನೆ ರಾಜಕೀಯ ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿದ ಮಾತು ಸಾಂದರ್ಭಿಕವೇ ಹೊರತು ದುರುದ್ದೇಶವಲ್ಲ: ಅಶ್ವತ್ಥನಾರಾಯಣ

ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿದ ಮಾತು ಸಾಂದರ್ಭಿಕವೇ ಹೊರತು ದುರುದ್ದೇಶವಲ್ಲ: ಅಶ್ವತ್ಥನಾರಾಯಣ

0

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದು ಸಚಿವ ಅಶ್ವತ್ಥನಾರಾಯಣ ಸಮಜಾಯಿಷಿ ಕೊಟ್ಟಿದ್ದಾರೆ.

ಟಿಪ್ಪು ಹೊಡೆದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆಯಬೇಕು ಎಂಬ ಹೇಳಿಕೆಗೆ ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿ ಈ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗೆ ವೈಯಕ್ತಿಕವಾಗಿ ನೋವಾಗಿದ್ರೆ ವಿಷಾದ ವ್ಯಕ್ತಪಡಿಸ್ತೇನೆ ಎಂದರು.

ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಅನ್ನೋ ಬಗ್ಗೆ ಸ್ಪಷ್ಟನೆ ನೀಡಿದ ಅಶ್ವತ್ಥ್ ನಾರಾಯಣ್, ಮಂಡ್ಯದಲ್ಲಿ ಕಸಬಾ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಉದ್ದೇಶಿಸಿ ಮಾತನಾಡುವಾಗ ಮಾತನಾಡಿದೆ. ಟಿಪ್ಪು ಹೆಸರು ಉಲ್ಲೇಖ ಮಾಡಿದ್ದೆ. ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ಮಾಡ್ತಿದೆ. ಅದನ್ನು ಖಂಡಿಸಬೇಕಿದೆ. ಈ ಬಗ್ಗೆ ಜನರಿಗೆ ನಾನು ಸ್ಪಷ್ಟವಾಗಿ ಹೇಳಿದ್ದೆ ಎಂದರು.

ಬರುವ ಚುನಾವಣೆಯಲ್ಲಿ ಜನರ ಬೆಂಬಲ ನಮ್ಮ ಪರವಾಗಿ ಪಡೆದುಕೊಳ್ಳಬೇಕು. ನಾವು ಪ್ರಜಾಪ್ರಭುತ್ವ ದಲ್ಲಿ ಇದ್ದೇವೆ, ಯುದ್ಧದ ಕಾಲದಲ್ಲಿ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ಗೆಲ್ಲಬೇಕಿದೆ. ಆ ವಿಚಾರವಾಗಿ ಹೇಳಿದ್ದೇನೆ ಹೊರತು ಬೇರೆಯ ರೀತಿ ಅಲ್ಲ ಎಂದು ಸ್ಪಷ್ಟನೆ ನೀಡಿದರು.

ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಹ ವೈಯಕ್ತಿಕವಾಗಿ ಅಲ್ಲ. ಗೆಲುವು ಸೋಲು ಚುನಾವಣೆಯಲ್ಲಿ ಇದೆ. ಓಲೈಕೆ ಮಾಡುವ ಪಕ್ಷವನ್ನು ಸೋಲಿಸಬೇಕು. ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶವಾಗಿತ್ತು ಎಂದರು.

ಆದರೂ, ತನ್ನ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗೆ ವಯಕ್ತಿಕ ವಾಗಿ ನೋವಾಗಿದ್ರೆ ವಿಷಾದ ವ್ಯಕ್ತಪಡಿಸ್ತೇನೆ. ಇವರ ಹಾಗೆ ಸಿಎಂಗೆ ನಾಯಿ, ಪ್ರಧಾನಿಗೆ ನರಹಂತಕ ಎಂದು ಸಂಬೋಧಿಸಿ ಜಾತಿ, ಧರ್ಮ ಆಧಾರಿತವಾಗಿ ಸಮಾಜ ಒಡೆಯುವ ಕೆಲಸ ಮಾಡಿಲ್ಲ. ಇವರ ಹಾಗೆ ವೈಯಕ್ತಿಕವಾಗಿ ವಿರೋಧ ಮಾಡಿಲ್ಲ. ಚುನಾವಣೆಯಲ್ಲಿ ಗೆಲ್ಲಬೇಕೇ ವಿನಹ ಮತ್ತೆ ಬೇರೇನೂ ಅಲ್ಲ ಎಂದರು.

ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಹಿಂದಿನ ಲೇಖನನಾಳೆ ಮಂಡನೆಯಾಗುವ ಬಜೆಟ್ ಕೇವಲ ಭಾಷಣಕ್ಕಷ್ಟೇ ಸೀಮಿತ: ಡಿ.ಕೆ.ಶಿವಕುಮಾರ್
ಮುಂದಿನ ಲೇಖನಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಕೋಟ್ಯಾಂತರ ರೂ ಮೌಲ್ಯದ ಕಾರುಗಳು ಬೆಂಕಿಗಾಹುತಿ