ಬೆಂಗಳೂರು(Bengaluru): ದೇವಸ್ಥಾನ(Temple), ಮಸೀದಿ(Masjid), ಚರ್ಚು(Church) ಹೀಗೆ ಎಲ್ಲಾ ಕಡೆ ಧ್ವನಿ ವರ್ಧಕ(Speaker)ಗಳನ್ನು ಹಾಕುತ್ತಾರೆ, ಇದರಿಂದ ಯಾರಿಗೆ ತೊಂದರೆ ಆಗಿದೆ? ಚುನಾವಣಾ(Election) ವರ್ಷ(Year) ಎಂದು ಈ ರೀತಿ ಬೇಕಂತಲೇ ಕ್ಯಾತೆ ತೆಗೆಯುತ್ತಿದ್ದಾರೆ. ಇವೆಲ್ಲ ಸಮಾಜದ ಶಾಂತಿ, ಸಾಮರಸ್ಯ ಹಾಳುಮಾಡುವ ಪ್ರಯತ್ನಗಳು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ.
ಧಾರ್ಮಿಕ ಕೇಂದ್ರಗಳಲ್ಲಿ ಬಳಸುತ್ತಿರುವ ಧ್ವನಿವರ್ಧಕಗಳ ಬಗ್ಗೆ ರಾಜ್ಯದಾದ್ಯಂತ ಕೂಗು ಕೇಳಿಬಂದಿದ್ದು, ಈ ವಿಷಯದ ಕುರಿತು ಸಿದ್ದರಾಮಯ್ಯ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಇಂಥಾ ಘಟನೆಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರು ಬರಲ್ಲ, ಉದ್ಯೋಗ ಸೃಷ್ಟಿಯಾಗಲ್ಲ, ನಿರುದ್ಯೋಗ ಸಮಸ್ಯೆ ಹೋಗಲ್ಲ, ರಾಜ್ಯದ ಜಿಡಿಪಿ(GDP) ಬೆಳವಣಿಗೆಯಾಗಲ್ಲ ಎಂದು ತಿಳಿಸಿದರು.
ಈ ಎಲ್ಲ ಬೆಳವಣಿಗೆಗಳು ರಾಜ್ಯ ಸರಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ. ಮುಖ್ಯಮಂತ್ರಿಗಳು(Chief Minister) ಮೌನವಾಗಿರುವುದಲ್ಲ, ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದ್ದಾರೆ. ಆರ್.ಎಸ್.ಎಸ್(RSS) ಮತ್ತು ಭಜರಂಗದಳ (Bajarangadal) ಸರಕಾರಕ್ಕೆ ಗೊತ್ತಿಲ್ಲದೆ ಇಷ್ಟೆಲ್ಲಾ ಮಾಡುತ್ತಾ? ಇದನ್ನು ಸರಕಾರ ಹತ್ತಿಕ್ಕಬೇಕು, ಸಮಾಜದ ಶಾಂತಿ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಮಾಜದ ಕೋಮು ಸಾಮರಸ್ಯ ಹಾಳುಮಾಡುವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಇದು ನಿಮಗೆ ಮುಂದೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಲು ಬಯಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.