ಹೊಸದಿಲ್ಲಿ: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ(ಸೆ18 ) ಒಂದು ರಾಷ್ಟ್ರ ಒಂದು ಚುನಾವಣೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಮಾಜಿ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಿದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ.
ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.