ಮನೆ ಮನರಂಜನೆ ಗಾಯಕಿ ಲತಾ ಮಂಗೇಶ್ಕರ್ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

ಗಾಯಕಿ ಲತಾ ಮಂಗೇಶ್ಕರ್ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

0

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಅವರನ್ನು ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ದಾಖಲಾದಾಗ ಲತಾ ಮಂಗೇಶ್ಕರ್ ಅವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಕೆಲವು ದಿನಗಳ ಅವರು ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ತಿಳಿಸಿದ್ದರು.

ಜನವರಿ 9ರಂದು ಕೋವಿಡ್​ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್​ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಆರೋಗ್ಯ ತೀರಾ ಹದಗೆಟ್ಟಿದ್ದು, ಐಸಿಯುನಲ್ಲಿಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ.