ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ 2ನೇ ಮದುವೆಯಾಗಿದ್ದಾರೆ. ಬೆಂಗಳೂರು ನಗರದ ಹೊರವಲಯದ ಖಾಸಗಿ ರೆಸಾರ್ಟ್‌ವೊಂದರಲ್ಲಿ ನಟ ರಘು ದೀಕ್ಷಿತ್ ಮತ್ತು ವಾರಿಜಾಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸಡಗರದಿಂದ ಈ ವಿವಾಹ ನೆರವೇರಿದೆ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳು ವೈರಲ್ ಆಗುತ್ತಿವೆ.
ರಘು ದೀಕ್ಷಿತ್ ಜೊತೆ ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ ನೆರವೇರಿದೆ.
ರಘು ದೀಕ್ಷಿತ್ ಹಾಗೂ ವಾರಿಜಶ್ರೀ ವೇಣುಗೋಪಾಲ್ ಇಬ್ಬರೂ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಒಟ್ಟಿಗೆ ಕೆಲಸವನ್ನ ಮಾಡಿರುವ ಈ ಜೋಡಿ ಕೊರೊನಾ ಕಾಲದಲ್ಲಿ ಮಾಡಿದ `ಭರವಸೆಯ ಬದುಕು’ ಹಾಡು ಅಪಾರ ಮೆಚ್ಚುಗೆಗೆ ಕಾರಣವಾಗಿತ್ತು. ಇದೀಗ ಕೆಲವೇ ಕೆಲವರು ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.














