ಮೈಸೂರು(Mysuru): ಹೂಟಗಳ್ಳಿ ನಗರಸಭಾ ಕಾರ್ಯಾಲಯದ ವತಿಯಿಂದ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‌ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಸ್ಪೂನ್‌ಗಳು ಅಂಟಿಕೊಳ್ಳುವ ಫಿಲ್ಮ್ಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಪಾಗಳು ತರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ನಿಷೇಧಿಸಲಾಗಿದೆ.
ಮೇಲೆ ಸೂಚಿಸಿರುವ ನಿಷೇಧಿತ ಉತ್ಪನ್ನಗಳ ಜೊತೆಗೆ ಕೆಳಗಿನ ಹೆಚ್ಚುವರಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು 2022 ಜುಲೈ 1 ರಿಂದ ಜಾರಿಗೆ ಬರುವಂತೆ ಪಾಲಿಸ್ ಟೈಲರಿಂಗ್ ಮತ್ತು ವಿಸ್ತರಿತ ಪಾಲಿ ಸ್ಟೇರಿಂಗ್ ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್ (SUP) ಗಳಾದ ಪ್ಲಾಸ್ಟಿಕ್ ಸ್ಟಿಕ್‌ಗಳೊಂದಿಗೆ ಇಯರ್ ಬಡ್‌ಗಳು, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‌ಗಳು, ಪ್ಲಾಸ್ಟಿಕ್ ಐಸ್‌ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೇರಿನ್ (ಥರ್ಮಾಕೋಲ್) ಹಾಗೂ ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಕಪ್ಪುಗಳು ಹಾಗೂ ಲೋಟಗಳು , ಫೋರ್ಕ್ಗಳು , ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇ ಗಳಂತಹ ಕಟ್ಲರಿಗಳು, ಸ್ವೀಟ್ ಬಾಕ್ಸ್ಗಳ ಸುತ್ತ ಸುತ್ತುವ ಅಥವಾ ಪ್ಯಾಕಿಂಗ್ ಫಿಲಂಗಳು, ಆಮಂತ್ರಣ ಪತ್ರಗಳು ಮತ್ತು ಸಿಗರೇಟ್ ಪ್ಯಾಕೆಟ್‌ಗಳು, 100 ಮೈಕ್ರಾನ್‌ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಅಥವಾ ಬ್ಯಾನರ್‌ಗಳು, ಪ್ಲಾಸ್ಟಿಕ್ ಸ್ಟಿರರ್‌ಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ , ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿರುತ್ತದೆ.
ಮೇಲಿನ ಆದೇಶವನ್ನು ಕೈಗಾರಿಕೆಗಳು ವಾಣಿಜ್ಯ ಸಂಸ್ಥೆಗಳಾದ ಮಾಲ್‌ಗಳ ಮಾರುಕಟ್ಟೆ ಸ್ಥಳ, ಶಾಪಿಂಗ್ ಕೇಂದ್ರಗಳು, ಸಿನಿಮಾ ಮನೆಗಳು, ಪ್ರವಾಸಿ ಸ್ಥಳಗಳು, ಶಾಲೆಗಳು, ಕಾಲೇಜುಗಳು ಮತ್ತು ಇತರೆ ವಶಪಡಿಸಿಕೊಳ್ಳುವ ಮತ್ತು ಅಂತಹ ಕೈಗಾರಿಕೆಗಳಿಗೆ ಮುಚ್ಚುವ ಆದೇಶವನ್ನು ನೀಡಲಾಗುವುದು ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಹೊರಡಿಸಿದ ಮಾರ್ಗಸೂಚಿಯ ಪ್ರಕಾರ ಪರಿಸರ ಪರಿಹಾರವನ್ನು ಪ್ರತಿ ಟನ್‌ಗೆ 5000 ರೂ. ರಂತೆ ವಿಧಿಸಲಾಗುವುದು ಎಂದು ಹೂಟಗಳ್ಳಿ ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.