ಮನೆ ಸ್ಥಳೀಯ ಅವಹೇಳನಕಾರಿ ಪೋಸ್ಟರ್​ ನಿಂದ ಉದ್ವಿಗ್ನಗೊಂಡಿದ್ದ ಉದಯಗಿರಿ ಪರಿಸ್ಥಿತಿ ಶಾಂತ; ಎಡಿಜಿಪಿ

ಅವಹೇಳನಕಾರಿ ಪೋಸ್ಟರ್​ ನಿಂದ ಉದ್ವಿಗ್ನಗೊಂಡಿದ್ದ ಉದಯಗಿರಿ ಪರಿಸ್ಥಿತಿ ಶಾಂತ; ಎಡಿಜಿಪಿ

0

ಮೈಸೂರು: ಅವಹೇಳನಕಾರಿ ಪೋಸ್ಟರ್​ನಿಂದ ಸೋಮವಾರ ರಾತ್ರಿ ಉದ್ವಿಗ್ನಗೊಂಡಿದ್ದ ಉದಯಗಿರಿ ಪೊಲೀಸ್​ ಠಾಣೆಯ ಬಳಿ ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಹೇಳಿದ್ದಾರೆ.

Join Our Whatsapp Group

ಸ್ಥಳದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್ ಹಾಕಲಾಗಿದ್ದು, ಉನ್ನತ ಪೊಲೀಸ್​ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟರ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಠಾಣೆಗೆ ಕರತಂದ ಸಂದರ್ಭದಲ್ಲಿ ಕೆಲ ಯುವಕರು ನಿನ್ನೆ ರಾತ್ರಿ ಉದಯಗಿರಿ ಪೊಲೀಸ್​ ಠಾಣೆಯ ಬಳಿ ಜಮಾಯಿಸಿದ್ದರು. ಈ ವೇಳೆ ಆರೋಪಿ ಯುವಕನನ್ನು ಬಿಟ್ಟುಬಿಡುತ್ತಾರೆ ಎಂಬ ತಪ್ಪು ತಿಳುವಳಿಕೆಯಿಂದ ಗದ್ದಲ ಉಂಟಾಗಿದ್ದು, ಪರಿಸ್ಥಿತಿ ಅರಿತ ಪೊಲೀಸರು ಲಘು ಲಾಠಿ ಚಾರ್ಜ್​ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದಾಗ ಅಶ್ರುವಾಯು ಸಿಡಿಸುವ ಮೂಲಕ ಮಧ್ಯರಾತ್ರಿ ವೇಳೆಗೆ ಪರಿಸ್ಥಿತಿಯನ್ನು ಅತೋಟಿಗೆ ತರಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಡಿಜಿಪಿ ಭೇಟಿ : ಸೂಕ್ಷ್ಮ ಪರಿಸ್ಥಿಯನ್ನು ಅರಿತ ಎಡಿಜಿಪಿ ಜೀತೇಂದ್ರ, ಇಂದು ಬೆಳಗ್ಗೆ ಉದಯಗಿರಿ ಪೊಲೀಸ್​ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿರುವುದನ್ನು ವಿರೋಧಿಸಿ ಸಾವಿರಾರು ಜನ ಸೋಮವಾರ ರಾತ್ರಿ ಉದಯಗಿರಿ ಠಾಣೆಗೆ ಬಂದು ಪ್ರತಿಭಟನೆ ನಡೆಸಿದ್ದರು. ಅವಹೇಳನಕಾರಿ ಪೋಸ್ಟ್​ ಮಾಡಿದ ಆರೋಪಿಯನ್ನು ಬೇಗ ಬಿಟ್ಟು ಬಿಡುತ್ತಾರೆ ಎಂದು ಕೆಲವರು ಗಲಾಟೆ ಮಾಡಿದ್ದಾರೆ. ಗಲಾಟೆಯಲ್ಲಿ ಏಳು ಜನ ಪೊಲೀಸರಿಗೆ ಗಾಯ ಆಗಿದೆ. ಗಲಾಟೆ ಮಾಡಿದವರ ಬಂಧನಕ್ಕೆ ಸ್ಥಳೀಯ ಪೊಲೀಸರಿಂದ ಟೀಂ ರಚನೆ ಮಾಡಲಾಗಿದೆ. ಪೋಸ್ಟರ್ ವಿಚಾರದಲ್ಲಿ ಕೆಲವು ವಂದತಿ ಹಬ್ಬಿಸಿದ್ದಕ್ಕೆ ಈ ಗಲಾಟೆಯಾಗಿದೆ. ಗಲಾಟೆಯ ಹಿಂದೆ ಯಾರಿದ್ದಾರೆ, ಯಾವುದಾದರೂ ಸಂಘಟನೆ ಇದೆಯಾ ಎಂದುಬದರ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಬಳಿಕ ಈ ಬಗ್ಗೆ ಹೆಚ್ಚಿನ ವಿವರ ತಿಳಿದು ಬರಲಿದೆ. ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ ಎಂದು ಅವರು ಹೇಳಿದ್ದಾರೆ.

ಉದಯಗಿರಿಯ ಆಯಕಟ್ಟಿನ ಪ್ರದೇಶದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್ ಏರ್ಪಡಿಸಿದ್ದು, ಸ್ಥಳದಲ್ಲಿ ಮೈಸೂರು ನಗರ ಪೊಲೀಸ್​ ಕಮಿಷನರ್ ಸೀಮಾ ಲಾಟ್ಕರ್ ಹಾಗೂ ಎಸಿಪಿಗಳು ಮೊಕ್ಕಾಂ ಹೂಡಿದ್ದಾರೆ.