ಭರೂಚ್(Bharooch): ಗುಜರಾತ್‌ನ ಭರೂಚ್ ಜಿಲ್ಲೆಯ ರಾಸಾಯನಿಕ(Chemical) ಕಾರ್ಖಾನೆ(Factory) ಯೊಂದರಲ್ಲಿ ಸೋಮವಾರ ಮುಂಜಾನೆ ಸ್ಫೋಟ(Explosion) ಸಂಭವಿಸಿದ್ದು, ಆರು ಕಾರ್ಮಿಕರು ಮೃತಪಟ್ಟಿದ್ದಾರೆ.
ಅಹಮದಾಬಾದ್‌ನಿಂದ 235 ಕಿ. ದೂರದ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಮುಂಜಾನೆ 3 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಮೃತ ಆರು ಮಂದಿಯೂ ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದರು. ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆ ವೇಳೆ ಅದು ಏಕಾಏಕಿ ಸ್ಫೋಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ಕುರಿತು ಮಾಹಿತಿ ನೀಡಿರುವ ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್, ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಎಲ್ಲಾ ಆರು ಜನರು ಸಾವಿಗೀಡಾಗಿದ್ದಾರೆ. ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬೆಂಕಿಯನ್ನು ಸಹ ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಬೇರೆ ಯಾರೂ ಗಾಯಗೊಂಡಿಲ್ಲ ಎಂದು ಹೇಳಿದ್ದಾರೆ.