ಮನೆ ರಾಜ್ಯ ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ..

ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ..

0

ಬೆಂಗಳೂರು : ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಹೃದಯಸ್ತಂಭನದಿಂದ ಇಂದು ಮಧ್ಯಾಹ್ನ ನಿಧನರಾದರು. ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಲ್ ಭೈರಪ್ಪ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್‌ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರು ಪಡೆದಿದೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಕರ್ನಾಟಕ ಆದಿಯಾಗಿ ಭಾರತ ಮತ್ತು ವಿದೇಶಗಳಲ್ಲೂ ಅವರ ಕಾದಂಬರಿಗಳ ಕುರಿತಾದ ವಿಚಾರಗೋಷ್ಠಿಗಳು ನಡೆದು, ಅವರ ಕಾದಂಬರಿಗಳ ಅಧ್ಯಯನ ಗ್ರಂಥ ಸಂಪುಟಗಳು ಹೊರಬಂದಿವೆ. ಭೈರಪ್ಪನವರ ಕಾದಂಬರಿಗಳು ಕರ್ನಾಟಕದ ಹಲವು ವಿಶ್ವವಿದ್ಯಾಲಯಗಳ ಪಾಠ್ಯಗಳಾಗಿ ಸ್ಥಾನವನ್ನು ಪಡೆದಿರುವುದಲ್ಲೆದೆ, 20ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳ ಅಧ್ಯಯನದ ವಿಷಯವೂ ಆಗಿವೆ.

ಭೈರಪ್ಪನವರ 24 ಕಾದಂಬರಿಗಳನ್ನೂ ಹಾಗೂ ಸಾಹಿತ್ಯವಿಮರ್ಶೆ, ಸೌಂದರ್ಯಮೀಮಾಂಸೆ ಮತ್ತು ಸಂಸ್ಕೃತಿಯ ಕುರಿತಾಗಿ 5 ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ ಬಹುತೇಕ ಕಾದಂಬರಿಗಳು ಭಾರತದ ಹದಿನಾಲ್ಕು ಭಾಷೆಗಳಿಗೂ ಅನುವಾದಗೊಂಡು, ಆರು ಕಾದಂಬರಿಗಳು ಇಂಗ್ಲೀಷಿಗೆ ಅನುವಾದಗೊಂಡಿವೆ. ಅವರು ಮೂರು ದಶಕಳಿಗೂ ಹೆಚ್ಚು ಕಾಲ ಎನ್.ಸಿ.ಈ.ಆರ್.ಟಿ ಯಲ್ಲಿ ತತ್ತ್ವಶಾಸ್ತ್ರದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.