ಮೈಸೂರು: ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸುವಾಗ ಸಣ್ಣ ಪುಟ್ಟ ಸುಟ್ಟ ಗಾಯಗಳಾದ 9 ಮಂದಿ ಕೆ.ಆರ್.ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.
ಪಟಾಕಿ ಸಿಡಿದು ಕಣ್ಣಿಗೆ ಗಾಯವಾದ 7 ಮಂದಿಗೆ ಕಣ್ಣಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಒಳಿತ ಸುಟ್ಟ ಗಾಯಗಳ ವಿಭಾಗದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ.
ಕಳೆದ ಮೂರು ದಿನಗಳಲ್ಲಿ ಒಟ್ಟು 9 ಮಂದಿ ಪಟಾಕಿ ಸಿಡಿಸುವ ವೇಳೆ ಗಾಯಗಳಾಗಿ ಬಂದಿದ್ದರು. ಸಣ್ಣಪುಟ್ಟ ಗಾಯವಾದ್ದರಿಂದ ಎಲ್ಲರೂ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.