ಮೈಸೂರು : ರೈತರು ಮತ್ತು ಸಾರ್ವಜನಿಕರ ಭಾರಿ ವಿರೋಧದ ನಡುವೆಯೂ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ (ಕೆಇಆರ್‌ಸಿ)ದ ಆದೇಶದಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದ ವ್ಯಾಪ್ತಿಯಲ್ಲಿ ೨೦೨೫ರ ಜುಲೈ ೧ರಿಂದ ಹೊಸ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ (ಎಚ್‌ಟಿ ಹೊರತುಪಡಿಸಿ) ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸೆಸ್ಕ್ ನಿಗದಿಪಡಿಸಿರುವ ದರದಲ್ಲಿ ರೀಟೇಲ್ ಔಟ್‌ಲೆಟ್‌ಗಳಲ್ಲಿ ಸ್ಮಾರ್ಟ್ ಮೀಟರ್‌ಗಳನ್ನು ಖರೀದಿಸಿ, ವಿದ್ಯುತ್ ಸಂಪರ್ಕ ಪಡೆಯಬೇಕಿದೆ ಎಂದು ಸೆಸ್ಕ್‌ನ ಐಟಿ ಮತ್ತು ಎಂಐಎಸ್ ವಿಭಾಗದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ.೨೭ರಂದು ಗ್ರಾಹಕರ ಸಭೆ: ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿರುವ ಕುರಿತು ಗ್ರಾಹಕರಿಗೆ ಅರಿವು ಮೂಡಿಸಲು ಜೂ.೨೭ರಂದು ಬೆಳಗ್ಗೆ ೧೧.೩೦ಕ್ಕೆ ನಿಗಮ ಕಚೇರಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಆಸಕ್ತ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಸ್ಮಾರ್ಟ್ ಮೀಟರ್ ಅನುಷ್ಠಾನದ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.














