ಮನೆ ರಾಜಕೀಯ ಲಿಂಗಾಯತರ ಬಗ್ಗೆ ಹಗುರ ಮಾತು ಸಿದ್ದರಾಮಯ್ಯಗೆ ಶೋಭೆ ತರುವುದಿಲ್ಲ: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ

ಲಿಂಗಾಯತರ ಬಗ್ಗೆ ಹಗುರ ಮಾತು ಸಿದ್ದರಾಮಯ್ಯಗೆ ಶೋಭೆ ತರುವುದಿಲ್ಲ: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ

0

ಶಿವಮೊಗ್ಗ:  ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಮಾಜಿ ಸಿಎಂ ಸಿದ್ಧರಾಮಯ್ಯಗೆ ಶೋಭೆ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಕಿಡಿಕಾರಿದ್ದಾರೆ.

Join Our Whatsapp Group

ಲಿಂಗಾಯತ ಸಿಎಂ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ, ಸಿದ್ದರಾಮಯ್ಯಗೆ ಈಗಾಗಲೇ ಸೋಲು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೇಳಿಕೆ ಕೊಡುತ್ತಿದ್ದಾರೆ. ಸಿದ್ಧರಾಮಯ್ಯ ಹೇಳಿಕೆ ಖಂಡಿಸುತ್ತೇನೆ. ಸಿದ್ದರಾಮಯ್ಯ ಜವಾಬ್ದಾರಿಯಿಂದ ಮಾತನಾಡಬೇಕು. ಚುನಾವಣೆ ಬರುತ್ತೆ ಹೋಗುತ್ತೆ ಎಂದು ಟಾಂಗ್ ನೀಡಿದರು.

ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಸಹ ಸೋಲುತ್ತಾರೆ. ರಾಜ್ಯಕ್ಕೆ ಅಮಿತ್ ಶಾ ಎಂಟ್ರಿಕೊಟ್ಟಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಕೂಡ ಬರುತ್ತಾರೆ ಎಂದು ತಿಳಿಸಿದರು.

ಹಿಂದಿನ ಲೇಖನನ್ಯೂಜಿಲೆಂಡ್ ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ
ಮುಂದಿನ ಲೇಖನಲಕ್ನೋ:  ಬೀದಿನಾಯಿಗಳ ದಾಳಿಗೆ 7 ವರ್ಷದ ಬಾಲಕ ಬಲಿ