ಶ್ರೀರಂಗಪಟ್ಟಣ:ತಾಲೂಕಿನ ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯ ನಾರ್ತ್ ಬ್ಯಾಂಕ್ ಗ್ರಾಮದ ಸಾಫ್ಟ್ ವೇರ್ ಉದ್ಯೋಗಿನಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಗ್ರಾಮದ ನಿವಾಸಿ ನರಸಿಂಹ ಎಂಬುವರ ಮಗಳು ಕುಮಾರಿ (28) ಬೆಂಗಳೂರಿನಲ್ಲಿ ಅಕ್ಸೆನ್ಚರ್ ಕಂಪನಿಯಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದು,ಹಲವು ದಿನಗಳಿಂದ ವರ್ಕ್ ಫ್ರಮ್ ಹೋಂ ರೀತಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಈತ್ತಿಚಿಗೆ ತಾನೆ ನಿರ್ಮಿಸಿದ್ದ ಮನೆಯ ಮೊದಲ ಮಹಡಿಯಲ್ಲಿನ ರೂಮಿನ ಫ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಮೃತಳ ಸಹೋದರ ಚೆಲುವರಾಜು ನೀಡಿದ ದೂರಿನ ಮೇರೆಗೆ ಕೆಆರ್‌ಎಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಶವವನ್ನು ಮರಣೋತ್ತರ ಶವಪರೀಕ್ಷೆಗೆ ಮೈಸೂರು ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ರಿಸಲಾಗಿದೆ.