ನವದೆಹಲಿ (Newdelhi)- ಕೆಲವು ರಾಜ್ಯಗಳು ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡದೆ ಜನರಿಗೆ ʻಅನ್ಯಾಯʼ ಮಾಡಿವೆ ಎಂದು ಪ್ರಧಾನಿ (PM) ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳ ಜೊತೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಳೆದ ನವೆಂಬರ್ ನಲ್ಲಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಮತ್ತು ಜನರಿಗೆ ಅನ್ಯಾಯ ಮಾಡಿವೆ ಎಂದಿದ್ದಾರೆ.
ಕೆಲವು ರಾಜ್ಯಗಳು ತೆರಿಗೆಯನ್ನು ಕಡಿಮೆ ಮಾಡಿದೆ. ಆದರೆ ಕೆಲವು ರಾಜ್ಯಗಳು ಜನರಿಗೆ ಇದರ ಯಾವುದೇ ಪ್ರಯೋಜನವನ್ನು ನೀಡಲಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗುತ್ತಲೇ ಇವೆ. ಇದು ಒಂದು ರೀತಿಯಲ್ಲಿ ಜನರಿಗೆ ಅನ್ಯಾಯವಲ್ಲವೇ?. ಇದು ನೆರೆಯ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ ಎಂದ ಅವರು, ಹಲವು ರಾಜ್ಯ ಸರ್ಕಾರಗಳು ತೆರಿಗೆಯನ್ನು ಕಡಿಮೆ ಮಾಡಿ ಅದರ ಲಾಭವನ್ನು ನಾಗರಿಕರಿಗೆ ವರ್ಗಾಯಿಸಿದೆ. ಆದರೆ ಇನ್ನೂ ಕೆಲ ರಾಜ್ಯಗಳು ಮಾತ್ರ ಆ ಕೆಲಸ ಮಾಡಿಲ್ಲ. ರಾಜ್ಯ ಸರ್ಕಾರಗಳು ವ್ಯಾಟ್ ಕಡಿತಗೊಳಿಸಿ ಅದರ ಲಾಭವನ್ನು ನಾಗರಿಕರಿಗೆ ವರ್ಗಾಯಿಸಬೇಕು ಎಂದು ಹೇಳಿದರು.
ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಜಾರ್ಖಂಡ್ ಮತ್ತು ತಮಿಳುನಾಡು ಮುಂತಾದ ಹಲವು ರಾಜ್ಯಗಳು ಯಾವುದೋ ಕಾರಣಕ್ಕೆ ಕೇಂದ್ರ ಸರ್ಕಾರದ ಮಾತನ್ನು ಕೇಳಲಿಲ್ಲ ಮತ್ತು ಆ ರಾಜ್ಯಗಳ ನಾಗರಿಕರಿಗೆ ಹೊರೆಯಾಗುತ್ತಲೇ ಇದೆ. ನೀವು ವ್ಯಾಟ್ ಅನ್ನು ಕಡಿಮೆ ಮಾಡುವ ಮೂಲಕ ನಾಗರಿಕರಿಗೆ ಪ್ರಯೋಜನವನ್ನು ನೀಡಬೇಕು ಎಂದು ನಾನು ವಿನಂತಿಸುತ್ತೇನೆ ಎಂದು ಮೋದಿ ಹೇಳಿದರು.