ಮನೆ ಅಪರಾಧ ಆಸ್ತಿಗಾಗಿ ತಂದೆಯನ್ನೇ ಶೂಟ್ ಮಾಡಿದ ಮಗ

ಆಸ್ತಿಗಾಗಿ ತಂದೆಯನ್ನೇ ಶೂಟ್ ಮಾಡಿದ ಮಗ

0

ಮೈಸೂರು: ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಗನೇ ತಂದೆಯನ್ನು ಶೂಟ್‌ಔಟ್ ಮಾಡಿರುವ ಘಟನೆ ನಗರದ ವಿಜಯನಗರ ಮೂರನೇ ಹಂತದಲ್ಲಿ ನಡೆದಿದೆ.
ವಿಜಯನಗರದ ರೇಣುಕಾ ಕಾಲೇಜಿನ ಆಸ್ತಿ ವಿಚಾರವಾಗಿ ಕಳೆದ ಒಂದು ತಿಂಗಳಿನಿAದ ಅಪ್ಪ, ಮಗ ಮತ್ತು ಕುಟುಂಬಸ್ಥರ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಭಾನುವಾರ ಸಂಜೆ ಮೂರ್ನಾಲ್ಕು ಮಂದಿ ಸ್ನೇಹಿತರೊಂದಿಗೆ ಮನೆಗೆ ಬಂದಿರುವ ಮಗ ತಂದೆ ಶಿವಕುಮಾರ್ ಜೊತೆಗೆ ಆಸ್ತಿ ವಿಚಾರವಾಗಿ ಮತ್ತೆ ಗಲಾಟೆ ಶುರು ಮಾಡಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಜೋರಾಗಿದೆ. ತಂದೆ ಶಿವಕುಮಾರ್ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮನೆಯಲ್ಲೇ ಇದ್ದ ಏರ್‌ಗನ್‌ನಿಂದ ಮಗ ತಂದೆ ಶಿವಕುಮಾರ್ ಮೇಲೆಗೆ ಶೂಟ್ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಶಿವಕುಮಾರ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಮಗನೂ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶೂಟ್ ಔಟ್ ಮಾಡಿರುವ ಪುತ್ರ ಹಾಗೂ ಆತನ ಸ್ನೇಹಿತರು ಪರಾರಿಯಾಗಿದ್ದು, ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಹಿಂದಿನ ಲೇಖನಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರೀಯ ಆಯೋಗದ ಸದಸ್ಯೆ
ಮುಂದಿನ ಲೇಖನಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ನಿಧನ