ಮನೆ ರಾಷ್ಟ್ರೀಯ ಇಡಿ ವಿಚಾರಣೆಗೆ ಹಾಜರಾಗಲು ಸಮಯ ಕೋರಿದ ಸೋನಿಯಾ ಗಾಂಧಿ

ಇಡಿ ವಿಚಾರಣೆಗೆ ಹಾಜರಾಗಲು ಸಮಯ ಕೋರಿದ ಸೋನಿಯಾ ಗಾಂಧಿ

0

ನವದೆಹಲಿ (New Delhi): ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಆದರೆ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆನ್ನಲಾಗಿದೆ.  

ಸೋನಿಯಾ  ಗಾಂಧಿಯವರಿಗೆ ಕೋವಿಡ್ ದೃಢಪಟ್ಟ ನಂತರ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದ ಅವರನ್ನು ಎರಡು ದಿನಗಳ ಹಿಂದೆ ಡಿಸ್ಚಾರ್ಜ್ ಮಾಡಲಾಗಿದೆ.

ಜೂನ್ 2 ರಂದು ಸೋನಿಯಾ ಗಾಂಧಿಯವರಿಗೆ ಕೋವಿಡ್‌ ಸೋಂಕು ತಗುಲಿತ್ತು. ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ (ED) ಹೆಚ್ಚಿನ ಸಮಯವನ್ನು ಕೋರಿದ್ದರು.

ಬಳಿಕ ಜೂನ್ 12 ರಂದು ಉಸಿರಾಟದ ತೊಂದರೆಯಿಂದ  ಅವರನ್ನು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ಪಡೆದ ನಂತರ 2 ದಿನದ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.