ಮನೆ ಮನರಂಜನೆ ‘ಸದ್ದು ವಿಚಾರಣೆ ನಡೆಯುತ್ತಿದೆ’ ಚಿತ್ರ ನ.  25 ರಂದು ರಾಜ್ಯಾದ್ಯಂತ ತೆರೆಗೆ

‘ಸದ್ದು ವಿಚಾರಣೆ ನಡೆಯುತ್ತಿದೆ’ ಚಿತ್ರ ನ.  25 ರಂದು ರಾಜ್ಯಾದ್ಯಂತ ತೆರೆಗೆ

0

ಭಾಸ್ಕರ್ ಆರ್. ನೀನಾಸಂ ನಿರ್ದೇಶನದ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ. ನವೆಂಬರ್ 25ಕ್ಕೆ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಇತ್ತೀಚೆಗೆ ಟ್ರೇಲರ್‌ ಕೂಡಾ ಬಿಡುಗಡೆಯಾಗಿದೆ. ನೈಜ ಘಟನೆ ಆಧರಿಸಿ ಹೆಣೆದ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ ‘ಸದ್ದು ವಿಚಾರಣೆ ನಡೆಯುತ್ತಿದೆ’. ಚಿತ್ರಕ್ಕೆ ಕಥೆ ಬರೆದು ಭಾಸ್ಕರ್ ಆರ್. ನೀನಾಸಂ ನಿರ್ದೇಶನ ಮಾಡಿದ್ದಾರೆ.

ರಾಕೇಶ್ ಮಯ್ಯ, ಪಾವನ ಗೌಡ ನಾಯಕ ನಾಯಕಿಯಾಗಿ ನಟಿಸಿದ್ದು, ಪ್ರಮುಖ ಪಾತ್ರದಲ್ಲಿ ಮಧುನಂದನ್ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಘು ಶಿವಮೊಗ್ಗ, ಜಹಾಂಗೀರ್ ಈ ಚಿತ್ರದ ತಾರಾಗಣದಲ್ಲಿದ್ದಾರೆ.

ಹಿರಿಯ ನಟ ಅಚ್ಯುತ್ ಕುಮಾರ್ ಮಾತನಾಡಿ, ಭಾಸ್ಕರ್ ನಟನೆ ಮಾಡ್ತಾನೆ ಅಂತ ಗೊತ್ತಿತ್ತು, ನಿರ್ದೇಶನ ಮಾಡುತ್ತಾನೆ ಎಂದು ಗೊತ್ತಿರಲಿಲ್ಲ. ನನ್ನ ನಾಟಕಗಳಲ್ಲಿ ಭಾಸ್ಕರ್ ಅಭಿನಯಿಸಿದ್ದಾನೆ. ತುಂಬಾ ಚೆನ್ನಾಗಿ ನಿರ್ದೇಶನ ಮಾಡಿದ್ದಾನೆ. ಈ ಚಿತ್ರದಲ್ಲಿ ಇನ್‌ಸ್ಪೆಕ್ಟರ್ ಪಾತ್ರ ಎಂದು ಹೇಳಿದಾಗ ನಾನು ಮಾಡೋದಿಲ್ಲ. ಚಿತ್ರದಲ್ಲಿರೋ ಕೋಳಿ ಕಳ್ಳರ ಪಾತ್ರ ಕೊಡು ತುಂಬಾ ಇಂಟ್ರಸ್ಟಿಂಗ್ ಆಗಿದೆ ಎಂದೆ. ಆದ್ರೆ ಇನ್ಸ್‌ಪೆಕ್ಟರ್‌ ಪಾತ್ರವನ್ನು ನೀವೇ ಮಾಡಬೇಕು ಎಂದು ಹೇಳಿದೆ.

ಹಾಗಾಗಿ ಇನ್ಸ್‌’ಪೆಕ್ಟರ್‌ ಪಾತ್ರ ನಿರ್ವಹಿಸಿದ್ದೇನೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಮಧುನಂದನ್ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಟನೆ ಕೂಡ ಮಾಡಿದ್ದಾರೆ. ನಟನೆಯಲ್ಲಿ ಅವರಿಗೆ ತುಂಬಾ ಪ್ಯಾಶನ್ ಇದೆ‌. ಇನ್ನೊಂದಿಷ್ಟು ತಯಾರಿ ಮಾಡಿಕೊಂಡ್ರೆ ಒಳ್ಳೆ ಭವಿಷ್ಯ ಇದೆ ಎಂದರು.

ಎಂ. ಎಂ. ಸಿನಿಮಾಸ್ ಬ್ಯಾನರ್ ಅಡಿ ಸುರಭಿ ಲಕ್ಷ್ಮಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಜ್‌’ಕಾಂತ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರು ಸಂಗೀತ, ಶಶಿಧರ್ ಪಿ. ಸಂಕಲನ ಚಿತ್ರಕ್ಕಿದೆ.

ಹಿಂದಿನ ಲೇಖನಮೈಸೂರು ನೂತನ ಪೊಲೀಸ್ ಕಮಿಷನರ್ ಆಗಿ ಬಿ. ರಮೇಶ್ ನೇಮಕ
ಮುಂದಿನ ಲೇಖನಸಿದ್ದರಾಮಯ್ಯ ಅವರನ್ನು ಸ್ವಪಕ್ಷದವರೇ ಸೋಲಿಸುತ್ತಾರೆ ಎಂದ ಹೆಚ್.ಡಿ.ಕುಮಾರಸ್ವಾಮಿ