Saval TV on YouTube
ನವದೆಹಲಿ(Newdelhi): ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ಐಪಿಎಲ್’ನ ಡೆಲ್ಲಿ ಕ್ಯಾಪಿಟಲ್ಸ್’ನ ನಿರ್ದೇಶಕರಾಗಿ ನೇಮಕಗೊಳ್ಳುತ್ತಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಗಂಗೂಲಿ ಬಿಸಿಸಿಐನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಐಎಲ್ ಟಿ ದುಬೈ ಕ್ಯಾಪಿಟಲ್ಸ್ ಮತ್ತು ಎಸ್’ಎ ಟಿ20 ಲೀಗ್ನ ಪ್ರಿಟೊರಿಯಾ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.
ಸೌರವ್ ಅವರು ಈ ವರ್ಷದಿಂದ ಡೆಲ್ಲಿ ಕ್ಯಾಪಿಟಲ್ಸ್ಗೆ ಮರಳಲಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದ ಮಾತುಕತೆಗಳು ಮತ್ತು ನೇಮಕ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಐಪಿಎಲ್ ಜೊತೆ ಕೆಲಸ ಮಾಡಿದರೆ ಅದು ಡೆಲ್ಲಿ ಕ್ಯಾಪಿಟಲ್ಸ್ ಜೊತೆಗೇ ಆಗಿರುತ್ತದೆ ಎಂದು ಐಪಿಎಲ್ನ ಮೂಲಗಳು ತಿಳಿಸಿವೆ.















