ಮನೆ ಕ್ರೀಡೆ ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾಗೆ ಐದು ವಿಕೆಟ್ ಗಳ ಭರ್ಜರಿ ಜಯ

ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾಗೆ ಐದು ವಿಕೆಟ್ ಗಳ ಭರ್ಜರಿ ಜಯ

0

ಬರ್ಹಾ(ದಕ್ಷಿಣ ಆಫ್ರಿಕಾ): ಸೇಂಟ್ ಜಾರ್ಜ್ ಪಾರ್ಕ್ ಮೈದಾನದಲ್ಲಿ ನಡೆದ ಟಿ20 ಎಡರನೇ ಪಂದ್ಯದಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ರಿಂಕು ಸಿಂಗ್ ಮತ್ತೊಮ್ಮೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೂ ಸಹ ಪ್ರಯೋಜನವಾಗಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಬೌಲರ್ ಗಳು ವಿಫಲರಾದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 19.3 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 180 ರನ್ ಗಳಿಸಿದ್ದ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಇನ್ನು ಮಳೆ ನಿಂತ ಬಳಿಕ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತಗಳೊಂದಿಗೆ ಸೌತ್ ಆಫ್ರಿಕಾ ತಂಡಕ್ಕೆ 15 ಓವರ್ ಗಳಲ್ಲಿ 152 ರನ್ ಗಳ ಗುರಿ ನೀಡಲಾಯಿತು.

ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ ಅಂತಿಮವಾಗಿ 13.5 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 154 ರನ್ ಬಾರಿಸುವ ಮೂಲಕ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಸೌತ್ ಆಫ್ರಿಕಾ ತಂಡ : ಮ್ಯಾಥ್ಯೂ ಬ್ರೀಟ್ಝ್ಕೆ, ರೀಝ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೇಝ್ ಶಮ್ಸಿ.

ಭಾರತ ತಂಡ : ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮುಕೇಶ್ ಕುಮಾರ್.

ಹಿಂದಿನ ಲೇಖನಮಂಗಳೂರು: ಮಂಗಳಾ ಕ್ರೀಡಾಂಗಣದ ಈಜುಕೊಳದಲ್ಲಿ ಈಜುತ್ತಿದ್ದ ಯುವಕ ಸಾವು
ಮುಂದಿನ ಲೇಖನಅಕ್ರಮ ಸಾರಾಯಿ ಘಟಕದ ಮೇಲೆ ದಾಳಿ: 2240 ಲೀಟರ್ ಸ್ಪಿರಿಟ್, 222 ಲೀಟರ್ ನಕಲಿ ಲಿಕ್ಕರ್ ವಶ