ಮನೆ ಸುದ್ದಿ ಜಾಲ ದಕ್ಷಿಣ ರಾಜ್ಯಗಳ ರೈತ ಮುಖಂಡರಿಂದ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭೇಟಿ

ದಕ್ಷಿಣ ರಾಜ್ಯಗಳ ರೈತ ಮುಖಂಡರಿಂದ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭೇಟಿ

0

ಚೆನ್ನೈ: ತಮಿಳುನಾಡು-ಕರ್ನಾಟಕ ಆಂಧ್ರಪ್ರದೇಶ ತೆಲಂಗಾಣ ಪುದುಚೆರಿ ಕೇರಳ  ರಾಜ್ಯಗಳ ರೈತ ಮುಖಂಡರುಗಳು ಇಂದು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ಭೇಟಿ ಮಾಡಿ ರೈತರ ಸಮಸ್ಯೆಗಳ ಬಗ್ಗೆ ಗಮನಸೆಳೆದರು.

ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಶಾಸನಬದ್ಧ ಖಾತ್ರಿ ಗೊಳಿಸಲು ಕಾನೂನು ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರ ಅರಿಶಿನ ಬೆಳೆಗೆ ಶೇಕಡಾ 5ರಷ್ಟು ಜಿಎಸ್ಟಿ ವಿಧಿಸಿರುವುದನ್ನು ರದ್ದು  ಮಾಡಬೇಕು. ಅರಿಶಿನ ಬೆಳೆಗೆ 15000 ರೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಸರ್ಕಾರ ಖರೀದಿ ಕೇಂದ್ರಗಳ ಮೂಲಕ ಖರೀದಿಸುವಂತೆ ಆಗಬೇಕು. ಕಬ್ಬಿನ ಎಪ್ ಆರ್ ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿ ಮಾಡಲು ಕೇಂದ್ರಕ್ಕೆ ಒತ್ತಾಯಿಸಬೇಕು. ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಆಯಾ ವರ್ಷದ ಇಳುವರಿ ಆಧರಿಸಿ

ಎಫ್ ಆರ್ ಪಿ ದರ ರೈತರಿಗೆ ನೀಡುವಂತಾಗಬೇಕು. ಕೇಂದ್ರ ಸರ್ಕಾರ  ಖರೀದಿಸುವ ಕನಿಷ್ಠ ಬೆಂಬಲ ಬೆಲೆ ಖರೀದಿ ಅನುದಾನ ಎಲ್ಲಾ ರಾಜ್ಯಗಳಿಗೂ ಸಮನಾಗಿ ಹಂಚಿಕೆ ಮಾಡಿ  ಖರೀದಿಸುವಂತೆ ಆಗಬೇಕು ಎಂದು ಒತ್ತಾಯಿಸಿದರು.

ಕಾಡಂಚಿನ ಪ್ರಾಣಿಗಳ ಹಾವಳಿಯಿಂದ ರೈತರ ಬೆಳೆಗಳು ರೈತರ ಜೀವನ ನಾಶವಾಗುತ್ತಿರುವುದನ್ನು ತಪ್ಪಿಸಲು ಐವತ್ತು ವರ್ಷಗಳ ಹಿಂದೆ ರಚಿತವಾಗಿರುವ ವನ್ಯಜೀವಿ ಸಂರಕ್ಷಣೆ ಕಾಯ್ದೆ ತಿದ್ದುಪಡಿ ಮಾಡಲು ಕೇಂದ್ರಕ್ಕೆ ಒತ್ತಾಯಿಸಬೇಕು ಎಂದು ಮುಖ್ಯಮಂತ್ರಿ ಸ್ಟಾಲಿನ್ ರವರನ್ನು ಒತ್ತಾಯಿಸಲಾಯಿತು ,ರೈತರ ವಿಚಾರದಲ್ಲಿ ತಮಿಳುನಾಡು ಸರ್ಕಾರ ಸದಾ ನಿಮ್ಮ ಜೊತೆ ಇರುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರೈತ ಮುಖಂಡರ ನಿಯೋಗದಲ್ಲಿ ಅರಿಶಿನ ಬೆಳೆಗಾರರ ಸಂಘದ ರಾಷ್ಟ್ರೀಯ ಅಧ್ಯಕ್ಷ ತಮಿಳುನಾಡಿನ ದೈವಸಿಗಾಮಣಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಕುರುಬೂರು ಶಾಂತಕುಮಾರ್ ರಾಷ್ಟ್ರೀಯ ಉಪಾಧ್ಯಕ್ಷ ತೆಲಂಗಾಣದ ನರಸಿಂಹ ನಾಯ್ಡು ಕೇರಳ ರಾಜ್ಯದ ಪಿ ಟಿ ಜಾನ್, ತಮಿಳುನಾಡಿನ ರಾಮಗೌಂಡರ್,ಇಲ್ಲಂಗೂವನ್ ವೆಲಂಗಣಿ,ಎಳಿಲ್ಲನ್ ಕಾಂಚಿಪುರಂ,ಬಾಬು  ಕೊಯಮತ್ತೂರು, ಮಾಣಿಕ್ಯಂ ಹುಣಸೂರು,ವಿಮಾಲ್ ಕುಮಾರ, ಮುಂತಾದವರಿದ್ದರು

ಹಿಂದಿನ ಲೇಖನನ್ಯಾ.ಮಲ್ಲಿಕಾರ್ಜುನಗೌಡ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಒತ್ತಾಯ
ಮುಂದಿನ ಲೇಖನಸೆಲ್ಫಿ ಕ್ರೇಜ್: ಹೊಗೇನಕಲ್ ಜಲಪಾತದಲ್ಲಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು