ಮೈಸೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಮತದಾನದ ಮತ ಎಣಿಕೆ ಗುರುವಾರ ನಡೆಯುತ್ತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಮೊದಲ ಪ್ರಾಶಸ್ತ್ಯ ಮತದಲ್ಲಿ ವಿವೇಕಾನಂದ ಮೊದಲ ಗೆಲುವು ಸಾಧಿಸಿದ್ದಾರೆ.
ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರು 3258 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಕೆ.ವಿವೇಕಾನಂದ ಗೆಲುವಿನ ಸನಿಹದಲ್ಲಿದ್ದಾರೆ.
ವಿವೇಕಾನಂದ ಅವರಿಗೆ 10823 ಮತಗಳು ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರು 6201 ಮತಗಳನ್ನು ಪಡೆದಿದ್ದಾರೆ. ವಾಟಾಳ್ ನಾಗರಾಜ್ ಗೆ 84 ಮತಗಳು ಮಾತ್ರ ಸಿಕ್ಕಿದೆ.
Saval TV on YouTube